ಪಿರಿಯಾಪಟ್ಟಣ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪರವಾನಗಿ ಭೂಮಾಪಕರ ಸಂಘದವರು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾಧ್ಯಕ್ಷ ಮಹದೇವೇಗೌಡ ಮಾತನಾಡಿ, ‘ಪರವಾನಗಿ ಭೂಮಾಪಕರಾದ ನಾವು 23 ವರ್ಷಗಳಿಂದ ರೈತರು ಮತ್ತು ಸರ್ಕಾರದ ಕೆಲಸಗಳನ್ನು ನಿರ್ವಹಿಸುತ್ತಾ ಬಂದಿದ್ದು, ಈಗ ವಯೋಮಿತಿ ಮೀರಿದ್ದರಿಂದ ಭೂಮಾಪಕರ ಕೆಲಸ ಬಿಟ್ಟು, ಬೇರೆ ಕೆಲಸವನ್ನು ನಿರ್ವಹಿಸಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದೇವೆ. ಆದ್ದರಿಂದ ನಮ್ಮ ಸೇವೆಯನ್ನ ಪರಿಗಣಿಸಿ ಸರ್ಕಾರಿ ಭೂಮಾಪಕರ ಹುದ್ದೆಯಲ್ಲಿ ವಿಲೀನಗೊಳಿಸಬೇಕೆಂದು ಹಲವು ಬಾರಿ ಮನವಿ ಮಾಡಿದ್ದೇವೆ. ಇಲಾಖೆಯಲ್ಲಿ ಕೆಲವೊಂದು ಕಠಿಣ ನಿಯಮಗಳ ತಿದ್ದುಪಡಿಯಿಂದ ಈಗ ಕೆಲಸ ನಿರ್ವಹಿಸಲು ಸಾಧ್ಯವಾಗದಂತಹ ಪರಿಸ್ಥಿತಿಗೆ ತಲುಪಿದ್ದೇವೆ, ಇದನ್ನು ತಕ್ಷಣ ಸರಳೀಕರಣಗೊಳಿಸಬೇಕು’ ಎಂದು ಮನವಿ ಮಾಡಿದರು.

‘ಪರವಾನಗಿ ಭೂಮಾಪಕರು ಇಂದು ಸರ್ಕಾರಿ ಭೂಮಾಪಕರು ನಿರ್ವಹಿಸುವ ಎಲ್ಲಾ ತರಹದ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದು, ಯಾವುದೇ ಜೀವನ ಭದ್ರತೆಯಿಲ್ಲದೆ, ಸೇವಾ ಆಧಾರವಿಲ್ಲದೆ ಕನಿಷ್ಠ ಸೇವಾಶುಲ್ಕವನ್ನು ಪಡೆದು, ಜೀವನ ನಡೆಸುತ್ತಿದ್ದೇವೆ. ಆದ್ದರಿಂದ ಇಲಾಖೆ ಮತ್ತು ಸರ್ಕಾರ ನಿಗದಿ ಮಾಡಿರುವ ಸೇವಾ ಶುಲ್ಕ ಅವೈಜ್ಞಾನಿಕವಾಗಿದೆ’ ಎಂದು ಆರೋಪಿಸಿದರು.

‘ಸೇವಾ ಶುಲ್ಕವನ್ನು ಸಾಕಾಲದಲ್ಲಿ ಪಾವತಿಸದೆ ಇಲಾಖೆಯು ಬಾಕಿ ಉಳಿಸಿಕೊಂಡು ಮಕ್ಕಳ ವಿದ್ಯಾಭ್ಯಾಸ, ತಂದೆ- ತಾಯಿಗಳ ನಿರ್ವಹಣೆ ಕಷ್ಟವಾಗುತ್ತಿರುವುದರಿಂದ ಸಮಯಕ್ಕೆ ಸರಿಯಾಗಿ ಮತ್ತು ಈಗ ನೀಡುತ್ತಿರುವ ಶುಲ್ಕವನ್ನು ಪರಿಷ್ಕರಿಸಬೇಕು’ ಎಂದು ಮನವಿ ಮಾಡಿದರು.

‘ವಿಲೇ ಮಾಡಿದ ಎಲ್ಲಾ ಕಡತಗಳಿಗೂ ಸಂಭಾವನೆ ಭರಿಸಬೇಕು, ಕೂಡಲೇ ಸೇವಾ ಭದ್ರತೆ ಕಲ್ಪಿಸಿಕೊಡಬೇಕು’ ಎಂದು ಮನವಿ ಮಾಡಿದರು.

ತಾಲ್ಲೂಕು ಅಧ್ಯಕ್ಷ ಬಿ.ಆರ್.ಮಂಜು, ಉಪಾಧ್ಯಕ್ಷ ಎಚ್.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬಿ.ಕೆ.ಪ್ರಜ್ವಲ್, ಖಜಾಂಚಿ ಅರುಣ್ ಕುಮಾರ್, ಸಲಹೆಗಾರರಾದ ಸಂಜಯ್ ಕುಮಾರ್ ಮತ್ತು ಪದಾಧಿಕಾರಿಗಳಾದ ಮಹೇಂದ್ರ, ರವಿ, ರಮೇಶ್, ಸುನೀಲ್, ರವಿ, ಸತೀಶ್, ಮಂಜು ನಾಯಕ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-38-87169143

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.