ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಚೆ ಇಲಾಖೆ | 40,889 ಪೊಸ್ಟ್‌ಮ್ಯಾನ್‌ ಹುದ್ದೆಗಳಿಗೆ ಅರ್ಜಿ: SSLC ವಿದ್ಯಾರ್ಹತೆ

Last Updated 6 ಫೆಬ್ರುವರಿ 2023, 7:32 IST
ಅಕ್ಷರ ಗಾತ್ರ

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 40,889 ಪೊಸ್ಟ್‌ ಮ್ಯಾನ್‌ (ಗ್ರಾಮೀಣ ಡಾಕ್‌ ಸೇವಕ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಸಲಾಗಿದೆ. ರಾಜ್ಯದಲ್ಲೂ 3036 ಹುದ್ದೆಗಳು ಖಾಲಿ ಇವೆ.

ಆಸಕ್ತರು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಹುದ್ದೆಗಳ ಸಂಖ್ಯೆ: 40,889 (ದೇಶದಲ್ಲಿ) 3036 (ಕರ್ನಾಟಕದಲ್ಲಿ)

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.

ವೇತನ:
ಬ್ರ್ಯಾಂಚ್‌ ಪೋಸ್ಟ್‌ಮಾಸ್ಟರ್‌: ₹12,000-₹29,380
ಅಸಿಸ್ಟಂಟ್ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್: ₹10,000-₹ 24,470
ಪೋಸ್ಟ್‌ಮ್ಯಾನ್‌: ₹10,000-₹24,470

ವಯಸ್ಸು: ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆ ದಿನಾಂಕಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು.
ಗರಿಷ್ಠ 40 ವರ್ಷ ಮೀರಿರಬಾರದು. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ: ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲನೆ ಮಾಡಿ, ನಂತರ ಮೆರಿಟ್ ಪಟ್ಟಿ ತಯಾರು ಮಾಡಲಾಗುತ್ತದೆ. ಶಾರ್ಟ್‌ ಲಿಸ್ಟ್‌ ಆದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ನೇಮಕಾತಿ ಮಾಡಿಕೊಳ್ಳಲಾಗುವುದು.

ಅರ್ಜಿ ಶುಲ್ಕ: ₹100

ಆನ್‌ಲೈನ್ ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 16-02-2023

ವೆಬ್‌ಸೈಟ್‌: https://indiapostgdsonline.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT