ಪುತ್ತೂರು: ರಾಜ್ಯದಾದ್ಯಂತ ಅಂಗವಿಕಲರು, ಎಂಡೋಪೀಡಿತರು ಹಾಗೂ ಹಿರಿಯ ನಾಗರಿಕರಿಗೆ 2 ತಿಂಗಳಿನಿಂದ ಮಾಸಾಶನ ಪಿಂಚಣಿ ಬಾರದೆ ಜೀವನ ನಿರ್ವಹಣೆಗೆ ತೊಂದರೆಯಾಗಿದ್ದು, ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಅಂಗವಿಕಲರ ಪುನರ್ವಸತಿ ಕಾರ್ಯಕರ್ತರು ಅಂಗವಿಕಲರ ಸೇವಾ ಕೇಂದ್ರದ ವತಿಯಿಂದ ಶಾಸಕ ಅಶೋಕ್ಕುಮಾರ್ ರೈ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಪುತ್ತೂರು ತಾಲ್ಲೂಕು ಪಂಚಾಯಿತಿ ಅಂಗವಿಕಲರ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ನವೀನ್ ಕುಮಾರ್, ಪುತ್ತೂರು ನಗರ ಸಭೆಯ ನಗರ ಪುನರ್ವಸತಿ ಕಾರ್ಯಕರ್ತ ಭರತ್ ಕೆ., ಕಡಬ ತಾಲ್ಲೂಕಿನ ಬೆಳಂದೂರು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಪ್ರಶಾಂತಿ ಆನಂದ ಗೌಡ, ಅಲಂಕಾರು ಗ್ರಾಮ ಪಂಚಾಯಿತಿ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತ ಮೋನಪ್ಪ ಬಿ.ಅವರೊಂದಿಗೆ ಅಂಗವಿಕಲರ ಆರೈಕೆದಾರರು ಭೇಟಿಯಾಗಿ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಶಾಸಕ, ಈ ಬಗ್ಗೆ ಸಾಮಾಜಿಕ ಭದ್ರತೆ ಪಿಂಚಣಿಗಳ ನಿರ್ದೇಶನಾಲಯದ ನಿರ್ದೇಶಕರಿಗೆ ಪತ್ರ ಬರೆದು ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-29-1846822871

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.