ರಾಯಚೂರು: ‘ಪ್ರಾಥಮಿಕ, ಪದವೀಧರ, ಪ್ರೌಢಶಾಲಾ ಶಿಕ್ಷಕರು ಸೇರಿದಂತೆ ದೈಹಿಕ ಶಿಕ್ಷಣ, ಚಿತ್ರಕಲಾ, ಸಂಗೀತ ಹಾಗೂ ರಂಗಕಲಾ ಶಿಕ್ಷಕರ ನೇಮಕಾತಿಗೆ ತಕ್ಷಣ ಅಧಿಸೂಚನೆ ಹೊರಡಿಸಬೇಕು’ ಎಂದು ಒತ್ತಾಯಿಸಿ ಆಕಾಂಕ್ಷಿಗಳು ಹಾಗೂ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಪದಾಧಿಕಾರಿಗಳು ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಎಐಡಿವೈಒ ರಾಜ್ಯ ಘಟಕದ ಅಧ್ಯಕ್ಷ ಶರಣಪ್ಪ ಉದ್ಬಾಳ್ ಮಾತನಾಡಿ, ‘ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ಒಂದು ಲಕ್ಷ ಹುದ್ದೆ ಭರ್ತಿ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿತ್ತು. ಅಧಿಕಾರಕ್ಕೆ ಬಂದು ಮೂರು ವರ್ಷಗಳಾದರೂ ಒಂದೇ ಒಂದು ಹುದ್ದೆ ಭರ್ತಿ ಮಾಡಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಶಿಕ್ಷಣ ಸಚಿವರು ಮೂರು ವರ್ಷಗಳಿಂದಲೂ 10 ಸಾವಿರ, 15 ಸಾವಿರ, 20 ಸಾವಿರ ಶಿಕ್ಷಕರ ನೇಮಕಾತಿ ಮಾಡುವುದಾಗಿ ಹೇಳಿಕೆ ನೀಡುತ್ತಲೇ ಇದ್ದಾರೆ. ಅತಿ ಶೀಘ್ರ ಎಂಬ ಪದಕ್ಕೆ ಅರ್ಥವೇ ಇಲ್ಲದಂತಾಗಿದೆ. ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಗಿಸಿ ಜೂನ್ ಒಂದಕ್ಕೆ ಹೊಸ ಶಿಕ್ಷಕರು ಬಂದೇ ಬರುತ್ತಾರೆ ಎಂದಿದ್ದರು. ಜೂನ್ ಒಂದಕ್ಕೆ ಕೇವಲ ಒಂದು ವಾರ ಮಾತ್ರ ಉಳಿದಿದ್ದು, ಇನ್ನೂ ಕೂಡ ನೇಮಕಾತಿ ಅಧಿಸೂಚನೆಯನ್ನೇ ಹೊರಡಿಸಿಲ್ಲ’ ಎಂದು ದೂರಿದರು.

‘ಇತ್ತೀಚೆಗೆ ಮುಖ್ಯಮಂತ್ರಿ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, 15,000 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲು ಸೂಚಿಸಿದ್ದಾರೆ. ಶಿಕ್ಷಣ ಸಚಿವರು ಬರಿ ಸುಳ್ಳುಗಳನ್ನೇ ಹೇಳಿಕೊಂಡು ಬಂದಿದ್ದಾರೆ’ ಎಂದು ಟೀಕಿಸಿದರು.

ಹೋರಾಟ ಸಮಿತಿಯ ರಾಜ್ಯ ಸಹ ಸಂಚಾಲಕ ಚನ್ನಬಸವ ಜಾನೇಕಲ್ ಮಾತನಾಡಿ, ‘ಕಲ್ಯಾಣ ಕರ್ನಾಟಕ ಭಾಗ ಇಡೀ ರಾಜ್ಯದಲ್ಲಿಯೇ ಶಿಕ್ಷಕರ ಗಂಭೀರ ಕೊರತೆ ಎದುರಿಸುತ್ತಿದೆ. ಕಲ್ಯಾಣ ಕರ್ನಾಟಕದ ಶಾಲೆಗಳಲ್ಲಿ ಒಟ್ಟು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಸೇರಿದಂತೆ 22,595 ಹುದ್ದೆಗಳು ಖಾಲಿ ಬಿದ್ದಿವೆ. ಅದರಲ್ಲಿ 18,317 ಪ್ರಾಥಮಿಕ ಶಾಲಾ ಶಿಕ್ಷಕರು, 4278 ಪ್ರೌಢಶಾಲಾ ಶಿಕ್ಷಕರ ಮಂಜೂರಾತಿ ಹುದ್ದೆಗಳು ಖಾಲಿ ಬಿಡಲಾಗಿದೆ. ಈ ವಿಷಯದಲ್ಲಿ ರಾಯಚೂರು ಜಿಲ್ಲೆ ಅತ್ಯಂತ ಗರಿಷ್ಠ ಪ್ರಮಾಣದ ಶಿಕ್ಷಕರ ಕೊರತೆಯನ್ನು ಎದುರಿಸುತ್ತಿದೆ’ ಎಂದು ತಿಳಿಸಿದರು.

‘ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡು ಮಕ್ಕಳ ಸಮಗ್ರ ಬೆಳವಣಿಗೆಗೆ ದಾರಿ ಮಾಡಿಕೊಡಬೇಕು’ ಎಂದು ಒತ್ತಾಯಿಸಿದರು. ಮುಖ್ಯಮಂತ್ರಿ ಅವರಿಗೆ ಬರೆದ ಮನವಿ ಪತ್ರವನ್ನು ಗ್ರೇಡ್–2 ತಹಶೀಲ್ದಾರ್ ಪರಶುರಾಮ ಅವರಿಗೆ ಸಲ್ಲಿಸಲಾಯಿತು.

ಜಿಲ್ಲಾ ಜಂಟಿ ಕಾರ್ಯದರ್ಶಿಗಳಾದ ಶಿವಪ್ಪ ಅಸ್ಕಿಹಾಳ್, ವಿನೋದ ಕುಮಾರ, ವೆಂಕಟೇಶ, ಕಾಶಿನಾಥ ಎಂ.ಗಿಲೇರಿ, ಭೀಮರೆಡ್ಡಿ ನೆಲಹಾಳ್, ಹನುಮಂತ ಕಲ್ಲೂರು, ಬಸವರಾಜ, ಮಂಜುನಾಥ, ಶಿವಕುಮಾರ, ಸಂತೋಷ ಸಾಗರ, ಶರಣಬಸವ, ಶಿವಕುಮಾರ ಲಕ್ಕಮದಿನ್ನಿ, ಅಮೀರ್ ಬಹದ್ದೂರ್, ಎಐಎಂಎಸ್ಎಸ್ ಜಿಲ್ಲಾ ಕಾರ್ಯದರ್ಶಿ ಸರೋಜಾ ಗೋನವಾರ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಲಕ್ಷ್ಮಣ, ಶಿಕ್ಷಕ ಅಭ್ಯರ್ಥಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-32-433439215

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.