ರಾಯಚೂರು: ‘ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಬೇಕು. ದೈಹಿಕ ಶಿಕ್ಷಣ, ಚಿತ್ರಕಲಾ, ರಂಗಕಲಾ ಮತ್ತು ಸಂಗೀತ ಶಿಕ್ಷಕರ ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿ ಮೇ25 ರಂದು ಬೆಳಿಗ್ಗೆ 10.30ಕ್ಕೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ರಾಜ್ಯ ಘಟಕದ ಸಂಚಾಲಕ ಚನ್ನಬಸವ ಜಾನೇಕಲ್ ತಿಳಿಸಿದರು.

ಶಿಕ್ಷಣ ಸಚಿವರು ಅಧಿಕಾರಕ್ಕೆ ಬಂದಾಗಿನಿಂದಲೂ ಶಿಕ್ಷಕರ ನೇಮಕಾತಿ ನಡೆಸುವುದಾಗಿ ಕೇವಲ ಹೇಳಿಕೆಗಳನ್ನು ನೀಡುತ್ತಾ ಕಾಲಹರಣ ಮಾಡುತ್ತಿದ್ದಾರೆಯೇ ಹೊರತು, ಯಾವುದೇ ಗಂಭೀರ ನೇಮಕಾತಿ ಪ್ರಕ್ರಿಯೆಗಳನ್ನು ನಡೆಸುತ್ತಿಲ್ಲ ಎಂದು ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು.

ಸರ್ಕಾರದ ನಿರಾಸಕ್ತಿ ಮತ್ತು ನಿರ್ಲಕ್ಷ್ಯದ ವಿರುದ್ಧ ನಡೆಯಲಿರುವ ಹೋರಾಟದಲ್ಲಿ ನಿರುದ್ಯೋಗಿ ಪದವೀಧರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಹೋರಾಟ ಸಮಿತಿಯ ಜಂಟಿ ಕಾರ್ಯದರ್ಶಿ ವಿನೋದ ಕುಮಾರ, ಕಾಶಿನಾಥ ಗಿಲೇರಿ, ವೆಂಕಟೇಶ, ಅಮೀರ್ ಬಹದ್ದೂರ ನೆಲಹಾಳ್, ನರಸನಗೌಡ, ಬಸವರಾಜ, ಹನುಮಂತ ಕಲ್ಲೂರು ಸೇರಿದಂತೆ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-32-1836643130

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.