ಉದ್ಯೋಗ ವಾರ್ತೆ: ಭಾರತೀಯ ರೈಲ್ವೆ ಇಲಾಖೆಯಲ್ಲಿ 3591 ಹುದ್ದೆಗಳು

ಭಾರತೀಯ ರೈಲ್ವೆ ಇಲಾಖೆಯಲ್ಲಿ 3591 ಹುದ್ದೆಗಳು
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷೆ ಇಲ್ಲದೇ ನೇರ ನೇಮಕಾತಿ ನಡೆಸಲಾಗುತ್ತಿದ್ದು 10ನೇ ತರಗತಿ ಹಾಗೂ ಐಟಿಐ ಅಂಕದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಯು 10ನೇ ತರಗತಿ ಹಾಗೂ ಐಟಿಐ ಪರೀಕ್ಷೆ ಉತ್ತೀರ್ಣರಾಗಿರಬೇಕು.
ವಯೋಮಿತಿ: ಗರಿಷ್ಠ 24 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ಇದೆ. ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ: ಅರ್ಜಿ ಶುಲ್ಕ ₹ 100, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 24, 2021 ಹೆಚ್ಚಿನ ಮಾಹಿತಿಗೆ: www.rrc-wr.com
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.