ಬುಧವಾರ, ಆಗಸ್ಟ್ 10, 2022
23 °C

ತರಬೇತಿ ಭತ್ಯೆ ₹27,000: ಪವರ್ ಗ್ರಿಡ್‌ನಲ್ಲಿ ಟ್ರೈನಿ ಹುದ್ದೆಗಳ ನೇಮಕಕ್ಕೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪವರ್ ಗ್ರಿಡ್‌ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ ಖಾಲಿ ಇರುವ ಡಿಪ್ಲೋಮಾ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
 
ಹುದ್ದೆ: ಡಿಪ್ಲೋಮಾ ಟ್ರೈನಿ
ಹುದ್ದೆಗಳ ಸಂಖ್ಯೆ:  35
ಸ್ಥಳ: ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿ

ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಲೆಕ್ಟ್ರಿಕಲ್ ವಿಭಾಗದಲ್ಲಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.

 ವಯೋಮಿತಿ: ಜೂನ್‌ 29, 2021ಕ್ಕೆ ಅನ್ವಯವಾಗುವಂತೆ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ: ಒಬಿಸಿ, 2ಎ, 2ಬಿ, 3ಎ ಹಾಗೂ 3ಬಿ ಅವರಿಗೆ 3 ವರ್ಷ, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

 ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ವರ್ಗದ ಪುರುಷ ಅಭ್ಯರ್ಥಿಗಳಿಗೆ ₹300 ಹಾಗೂ ಎಸ್‌ಸಿ, ಎಸ್‌ಟಿ, ಅಂಗವಿಕಲ ಹಾಗೂ ಮಾಜಿ ಸೈನಿಕರಿಗೆ ಅರ್ಜಿ ಶುಲ್ಕವಿಲ್ಲ.

ತರಬೇತಿ ಭತ್ಯೆ: ₹27.000

 ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ (ಕಂಪ್ಯೂಟರ್‌ ಟೆಸ್ಟ್‌) ಮೂಲಕ ನೇಮಕಾತಿ ನಡೆಯಲಿದೆ.

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್‌ 29, 2021

 ಅಧಿಸೂಚನೆ ಲಿಂಕ್‌: https://www.powergrid.in/sites/default/files/ADVERTISEMENT-SR-2-DIPLOMA-...

ವೆಬ್‌ಸೈಟ್‌: https://www.powergrid.in/sr-ii-recruitment

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು