ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಕರ್ನಾಟಕ ಭವನದ ಖಾಲಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Last Updated 28 ಆಗಸ್ಟ್ 2021, 12:27 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಕರ್ನಾಟಕ ಭವನದಲ್ಲಿ ವಿವಿಧ ವೃಂದಗಳಲ್ಲಿ ಖಾಲಿಯಿರುವ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

32 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವುದಕ್ಕಾಗಿ ಫೆ.20 ರಂದು ಅಧಿಸೂಚನೆ ಹೊರಡಿಸಲಾಗಿತ್ತು.

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಹೆಚ್ಚುವರಿ ಆಯ್ಕೆಪಟ್ಟಿಯಂತೆ ಆ.24 ರಂದು ಬೆಂಗಳೂರಿನ ಕುಮಾರ ಕೃಪ ಅತಿಥಿ ಗೃಹದಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಅನ್ವಯಿಸುವ ಹುದ್ದೆಗಳಿಗೆ ಪ್ರಾವೀಣ್ಯತೆ ಪರೀಕ್ಷೆ ನಡೆಸಲಾಗಿತ್ತು.

ಆ.27ರಂದು ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮಾಹಿತಿಗಾಗಿ www.karnatakabhavan.karnataka.gov.in ವೀಕ್ಷಿಸಬಹುದಾಗಿದೆ ಎಂದು ನೇರ ನೇಮಕಾತಿ ಆಯ್ಕೆ ಸಮಿತಿ ಅಧ್ಯಕ್ಷ ಹಾಗೂ ದೆಹಲಿಯ ಕರ್ನಾಟಕ ಭವನದ ಆಯುಕ್ತ ಎಚ್.ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT