ಭಾನುವಾರ, ಸೆಪ್ಟೆಂಬರ್ 19, 2021
24 °C

ಸಬ್‌ಇನ್ಸ್‌ಪೆಕ್ಟರ್‌ ನೇಮಕಾತಿ: ಇಟಿ, ಪಿಎಸ್‌ಟಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇದ್ದ 947 ಸಿವಿಲ್‌ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳ ನೇಮಕಾತಿಯ ಇಟಿ, ಪಿಎಸ್‌ಟಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಹಿಂದೆ ಬೆಳಗಾವಿಯ ಡಿಎಆರ್ ಪರೇಡ್‌ ಮೈದಾನದಲ್ಲಿ ದಿನಾಂಕ 28-07-2021 ರಿಂದ 12-08-2021 ರವರೆಗೆ ಇಟಿ, ಪಿಎಸ್‌ಟಿ (ಸಹಿಷ್ಣುತೆ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ) ಪರೀಕ್ಷೆಯನ್ನು ನಿಗದಿ ಮಾಡಲಾಗಿತ್ತು. ಮಳೆಯ ಕಾರಣದಿಂದಾಗಿ ಈ ವೇಳಾಪಟ್ಟಿಯನ್ನು ರದ್ದು ಮಾಡಲಾಗಿತ್ತು. 

ಹೊಸ ಪರಿಷ್ಕೃತ ವೇಳಾಪಟ್ಟಿಯಂತೆ  ದಿನಾಂಕ 02-08-2021 ರಿಂದ 18-08-2021 ರವರೆಗೆ ಬೆಳಗಾವಿಯ ಡಿಎಆರ್ ಪರೇಡ್‌ ಮೈದಾನದಲ್ಲಿ ಇಟಿ, ಪಿಎಸ್‌ಟಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಲಿಖಿತ ಪರೀಕ್ಷೆಯನ್ನು ಅಕ್ಟೋಬರ್‌ ತಿಂಗಳಲ್ಲಿ ನಡೆಸಲು ಪೊಲೀಸ್‌ ಇಲಾಖೆ ನಿರ್ಧರಿಸಿದೆ. ಆದಾಗ್ಯೂ ಲಿಖಿತ ಪರೀಕ್ಷೆಯ ದಿನಾಂಕ ಇನ್ನು ಅಂತಿಮವಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು