ಗುರುವಾರ , ಮಾರ್ಚ್ 23, 2023
29 °C

Postal Dept Jobs | ಗ್ರಾಮೀಣ ಅಂಚೆ ಸೇವಕರ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಗ್ರಾಮೀಣ ಅಂಚೆ ಸೇವಕರ ನೇಮಕಕ್ಕೆ ಸಂಬಂಧಿಸಿ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಢಾಕ್ ಸೇವಕ್ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ವಲಯ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಎಲ್ಲ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು ಇಂಗ್ಲಿಷ್‌ನಲ್ಲಿ ಕನಿಷ್ಠ ತೇರ್ಗಡೆ ಅಂಕಗಳನ್ನು ಹೊಂದಿರಬೇಕು. ಕನ್ನಡವನ್ನು ಹತ್ತನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. ಅಲ್ಲದೆ 18ರಿಂದ 40 ವರ್ಷದ ವಯೋಮಿತಿ ಒಳಗಿರಬೇಕು. ಅಂಕಗಳ ಆಧಾರದಲ್ಲಿ ಆನ್‌ಲೈನ್ ಮೂಲಕವೇ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಫೆ.16 ಕೊನೆಯ ದಿನವಾಗಿದ್ದು, https://indiapostgdsonline.gov.in ವೆಬ್‌ಸೈಟ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂದು ಹೇಳಿದರು.

ಇದೇ ಮೊದಲ ಬಾರಿಗೆ ಗ್ರಾಮೀಣ ಅಂಚೆ ಸೇವಕರ ನೇಮಕಾತಿಯು ಅಖಿಲ ಭಾರತ ಮಟ್ಟದಲ್ಲಿ ಏಕಕಾಲದಲ್ಲಿ ನಡೆಯುತ್ತಿದೆ. ದೇಶಾದ್ಯಂತ ಒಟ್ಟು 40,889 ಹುದ್ದೆಗಳು ಖಾಲಿ ಇವೆ. ಕರ್ನಾಟಕದಲ್ಲಿ 3,036 ಹುದ್ದೆಗಳು ಖಾಲಿ ಇದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅಂಚೆ ವಿಭಾಗದಲ್ಲಿ 95 ಮತ್ತು ಪುತ್ತೂರು ಅಂಚೆ ವಿಭಾಗದಲ್ಲಿ 113 ಹುದ್ದೆಗಳು ಖಾಲಿ ಇವೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿ ಉಭಯ ಜಿಲ್ಲೆಗಳಲ್ಲಿ ಒಟ್ಟು 273 ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಶ್ರೀ ಹರ್ಷ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು