ಸಂಡೂರು: ‘ಜೆಎಸ್ಡಬ್ಲ್ಯೂ ಕಂಪನಿಯು ಗ್ರಾಮೀಣ ಪ್ರದೇಶದ ಯುವಕರಿಗೆ ಉತ್ತಮ ಗುಣಮಟ್ಟದ ತರಬೇತಿ ನೀಡಿ ಉದ್ಯೋಗ ಪ್ರಮಾಣ ಪತ್ರ ವಿತರಿಸುತ್ತಿರುವುದು ಶ್ಲಾಘನೀಯ. ಯುವಕರು ಕೌಶಲವಂತರಾಗಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು’ ಎಂದು ಶಾಸಕಿ ಅನ್ನಪೂರ್ಣ ತುಕಾರಾಂ ಹೇಳಿದರು.

ತಾಲ್ಲೂಕಿನ ತೋರಣಗಲ್ಲು ಗ್ರಾಮದ ಸರ್ಕಾರಿ ಐಟಿಐ ಕಾಲೇಜಿನ ಆವರಣದಲ್ಲಿ ಜೆಎಸ್ಡಬ್ಲ್ಯೂ ಫೌಂಡೇಶನ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಗ್ರಾಮೀಣ ಯುವಕರಿಗಾಗಿ ವಿದ್ಯುತ್ ತಂತ್ರಜ್ಞಾನ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಉದ್ಯೋಗ ಪತ್ರ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಜಿಂದಾಲ್ ಕಂಪನಿಯು ಯುವಕರಲ್ಲಿ ಕೌಶಲ, ಆತ್ಮವಿಶ್ವಾಸ ಮತ್ತು ಸ್ವಾವಲಂಬನೆಯನ್ನು ಬೆಳೆಸುವ ಮೂಲಕ ಕೈಗಾರಿಕೆಗಳ ಅಗತ್ಯಗಳಿಗೆ ಅನುಗುಣವಾಗಿ ಮಾನವ ಸಂಪನ್ಮೂಲವನ್ನು ಸಿದ್ಧಗೊಳಿಸುತ್ತಿದೆ. ಈ ಕಾರ್ಯಕ್ರಮಗಳು ಗ್ರಾಮೀಣ ಯುವಕರನ್ನು ಆರ್ಥಿಕವಾಗಿ ಸದೃಢ, ಸ್ವಾವಲಂಬಿ ನಾಗರಿಕರನ್ನಾಗಿ ರೂಪಿಸುವ ಮಹತ್ವದ ಕಾರ್ಯವನ್ನು ನಿರ್ವಹಿಸುತ್ತಿವೆ’ ಎಂದರು.

ಜೆಎಸ್ಡಬ್ಲ್ಯೂ ಫೌಂಡೇಶನ್ ದಕ್ಷಿಣ ವಿಭಾಗದ ಮುಖ್ಯಸ್ಥ ಪೆದ್ದಣ್ಣ ಬೀಡಲಾ, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಮಯೂರೇಶ್ ಬಾಪತ್, ಕಂಪನಿಯ ಅಧಿಕಾರಿಗಳಾದ ಶ್ರೀಕಾಂತ ಹೆಗಡೆ, ಸಚಿನ್ ಅಳವಟಗಿ, ವಿದ್ಯಾರ್ಥಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-25-1387308846

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.