ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಶಸ್ತ್ರ ಸೀಮಾ ಬಲ: 116 ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ

Last Updated 19 ಜುಲೈ 2021, 12:36 IST
ಅಕ್ಷರ ಗಾತ್ರ

ಕೇಂದ್ರ ಗೃಹ ಸಚಿವಾಲಯದಸಶಸ್ತ್ರ ಸೀಮಾ ಬಲದಲ್ಲಿ ಖಾಲಿ ಇರುವ ಸಬ್‌ ಇನ್ಸ್‌ಪೆಕ್ಟರ್‌ (ತಾಂತ್ರಿಕ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸದರಿ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಿ.

ಹುದ್ದೆಗಳ ಸಂಖ್ಯೆ: 116

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು (ಹುದ್ದೆಗಳಿಗೆ ಸಂಬಂಧಿಸಿದಂತೆ)

ವಯಸ್ಸು: ಜುಲೈ 2021ಕ್ಕೆ ಅನ್ವಯವಾಗುವಂತೆ 20ರಿಂದ 30 ವರ್ಷದೊಳಗಿನವರಾಗಿರಬೇಕು.

ವಯೋಮಿತಿ:ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷ ( ಜುಲೈ 2021ಕ್ಕೆ ಅನ್ವಯವಾಗುವಂತೆ). ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ: ದೈಹಿಕ ಕ್ಷಮತೆ ಹಾಗೂ ಲಿಖಿತ ಪರೀಕ್ಷೆ ಮೂಲಕ ಅಂತಿಮ ನೇಮಕಾತಿ ನಡೆಯಲಿದೆ.

ಅರ್ಜಿ ಶುಲ್ಕ:ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಸಾಮಾನ್ಯ ಹಾಗೂ ಇತರೆ ವರ್ಗಗಳ ಅಭ್ಯರ್ಥಿಗಳಿಗೆ ₹200

ಅರ್ಜಿ ಸಲ್ಲಿಸಲು ಕೊನೆಯ ದಿನ: 29, ಜುಲೈ 2021.

ಹೆಚ್ಚಿನ ಮಾಹಿತಿಗೆ: https://ssb.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT