ಮಾಸಿಕ ಭತ್ಯೆ ₹15,000: SBIನಲ್ಲಿ 6100 ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿಯನ್ನು ಪಡೆದಿರಬೇಕು. ಜುಲೈ 26 ಅರ್ಜಿ ಸಲ್ಲಿಸುವ ಕಡೆಯ ದಿನವಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬೇಕು.
ಹುದ್ದೆಗಳ ಸಂಖ್ಯೆ: 6100
ಕರ್ನಾಟಕದಲ್ಲಿನ ಖಾಲಿ ಹುದ್ದೆಗಳು: 200
ವಿದ್ಯಾರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಪದವಿಯನ್ನು ಪಡೆದಿರಬೇಕು.
ವೇತನ: ಮಾಸಿಕ ₹15,000 ತರಬೇತಿ ನೀಡಲಾಗುವುದು.
ವಯಸ್ಸು: 20 ರಿಂದ 28 ವರ್ಷದೊಳಗಿನವರಾಗಿರಬೇಕು. (ಮೀಸಲಾತಿ ನಿಯಮಗಳು ಅನ್ವಯಿಸುತ್ತವೆ).
ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.
ನೇಮಕಾತಿ ಪ್ರಕ್ರಿಯೆ: ನೇಮಕಾತಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಯಲಿದೆ.
ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹300, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನ: 26–7–2021
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ನೋಡಿ: www.bank.sbi/careers or www.sbi.co.in/careers
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.