ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು (SBI) ಖಾಲಿ ಇರುವ 7,150 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆದುಕೊಳ್ಳಬೇಕು ಎನ್ನುವವರಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಜಿ ಸಲ್ಲಿಸಲು ಇದೇ ಜೂನ್ 8 ಕೊನೆಯ ದಿನಾಂಕವಾಗಿದೆ.

7,150 ಹುದ್ದೆಗಳ ಪೈಕಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 276 ಹುದ್ದೆಗಳು ಖಾಲಿ ಇದ್ದು, ಕನ್ನಡ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಹಾಗಾದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು, ವೇತನ, ಅರ್ಜಿ ಶುಲ್ಕ ಹಾಗೂ ಅರ್ಜಿ ಪ್ರಕ್ರಿಯೆಯನ್ನು ಈ ಕೆಳಗಿನಂತೆ ತಿಳಿಯೋಣ.

ಪ್ರಮುಖ ದಿನಾಂಕಗಳು

ಅರ್ಜಿ ಆರಂಭ ದಿನಾಂಕ – ಮೇ 19

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜೂನ್ 8

ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಯಾವುದೇ ವಿಭಾಗದಲ್ಲಿ ಪದವಿ ಪೂರೈಸಿರಬೇಕು. ಸ್ಥಳೀಯ ಭಾಷೆಯಲ್ಲಿ ಉತ್ತಮ ಸಂವಹನ, ಓದುವುದು ಮತ್ತು ಬರೆಯಲು ಬರುವುದು ಕಡ್ಡಾಯ.

ವಯೋಮಿತಿ

ಕನಿಷ್ಠ ವಯೋಮಿತಿ 20 ವರ್ಷದಿಂದ ಗರಿಷ್ಠ 28 ವರ್ಷಗಳಾಗಿವೆ. ಪರಿಶಿಷ್ಟ ಜಾತಿ, ಪಂಗಡ, ಒಬಿಸಿ ಮತ್ತು ದಿವ್ಯಾಂಗ ಅಭ್ಯರ್ಥಿಗಳಿಗೆ ವರ್ಗವಾರು ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕ

ಸಾಮಾನ್ಯ ವರ್ಗದ ಅಭ್ಯರ್ಥಿಗಳು, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿ ₹300 ಅರ್ಜಿ ಶುಲ್ಕವನ್ನು ನಿಗದಿ ಪಡಿಸಲಾಗಿದೆ. ಉಳಿದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ನೇಮಕಾತಿ ಪ್ರಕ್ರಿಯೆ

ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಲಿಖಿತ ಪರೀಕ್ಷೆ ಹಾಗೂ ಸ್ಥಳೀಯ ಭಾಷೆಯ ಪ್ರಾವೀಣ್ಯತೆಯನ್ನು ಪರೀಕ್ಷಿಸಲಾಗುತ್ತದೆ. ಬಳಿಕ ಆಯ್ಕೆ ಮಾಡಲಾಗುತ್ತದೆ.

ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.....

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ....

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.