ಭಾರತೀಯ ಸ್ಟೇಟ್ ಬ್ಯಾಂಕ್ ಗ್ರಾಹಕ ಸೇವಾ ಮತ್ತು ಮಾರುಕಟ್ಟೆ ವಿಭಾಗದಲ್ಲಿ ಗುಮಾಸ್ತ ಹಂತದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ;

ಭಾರತೀಯ ಸ್ಟೇಟ್ ಬ್ಯಾಂಕ್(ಎಸ್ಬಿಐ) 13,735 ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಇದು ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್ ವಿಭಾಗದ ಗುಮಾಸ್ತ ಹಂತದ ಹುದ್ದೆಗಳಾಗಿವೆ. ಹುದ್ದೆಗಳ ಭರ್ತಿ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕ್ಕೆ 50 ಹುದ್ದೆಗಳನ್ನು ಮೀಸಲಿಟ್ಟಿದೆ. ಬಹುಮುಖ್ಯವಾಗಿ ಪ್ರಿಲಿಮ್ಸ್ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯುವ ಅವಕಾಶ ಕಲ್ಪಿಸಿದೆ. ನೇಮಕ ಪ್ರಕ್ರಿಯೆ ಭಾಗವಾಗಿ ಸ್ಥಳೀಯ ಭಾಷಾ ಪರೀಕ್ಷೆಯನ್ನೂ ನಡೆಸಲಾಗುತ್ತಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ :

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಡಿ.17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆ ದಿನ ಜನವರಿ 7, 2025. ಅರ್ಜಿ ಸಲ್ಲಿಕೆ ಮತ್ತಿತರ ಮಾಹಿತಿಗಾಗಿ https://www.sbi.co.in/web/careers/current-openings ಈ ಲಿಂಕ್ ಕ್ಲಿಕ್ ಮಾಡಿ.

ಅರ್ಜಿ ಶುಲ್ಕ ವಿವರ: ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹750 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ.

ಶುಲ್ಕಪಾವತಿ: ನೋಂದಣಿ ನಂತರ ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ಆನ್ಲೈನ್ ಮೋಡ್ ಮೂಲಕ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ನಿಗದಿತ ಜಾಲತಾಣದ ಮೂಲಕ ಆನ್ಲೈನ್ನಲ್ಲೇ ಅರ್ಜಿ ಸಲ್ಲಿಸಬೇಕು.

ವಿದ್ಯಾರ್ಹತೆ ಏನಿರಬೇಕು ?

ಯಾವುದೇ ವಿಶ್ವವಿದ್ಯಾಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಪದವಿಯ ಅಂತಿಮ ಸೆಮಿಸ್ಟರ್ / ವರ್ಷದಲ್ಲಿ ಓದುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ. ಆದರೆ, ಆಯ್ಕೆಯಾದ ನಂತರ ಪದವಿ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯ. ಪ್ರಮಾಣಪತ್ರ ಸಲ್ಲಿಸದಿದ್ದರೆ, ಆಯ್ಕೆಯನ್ನು ರದ್ದು ಮಾಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.

ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗೆಗೆ ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷಗಳು. ಸರ್ಕಾರಿ ಆದೇಶದಂತೆ ವರ್ಗಾವಾರು ವಯೋಮಿತಿ ಸಡಿಲಿಕೆ ಇರುತ್ತದೆ. ನಿಯಮಾನುಸಾರ ಒಬಿಸಿ ವರ್ಗದವರಿಗೆ ಮೂರು ವರ್ಷ, ಪರಿಶಿಷ್ಟ ಜಾತಿ ಮತ್ತು ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇದೆ.

ನೇಮಕ ಪ್ರಕ್ರಿಯೆ ಹೀಗಿರುತ್ತದೆ :

ಪ್ರಿಲಿಮ್ಸ್ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸ್ಥಳೀಯ ಭಾಷಾ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.2025ರ ಫೆಬ್ರುವರಿಯಲ್ಲಿ ಪ್ರಿಲಿಮ್ಸ್ ಪರೀಕ್ಷೆ ಹಾಗೂ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ಮುಖ್ಯ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಬ್ಯಾಂಕ್ ಅಧಿಸೂಚನೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.