ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ₹ 23,700: SBIನಲ್ಲಿ 2056 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ

Last Updated 5 ಅಕ್ಟೋಬರ್ 2021, 6:07 IST
ಅಕ್ಷರ ಗಾತ್ರ

ಕರ್ನಾಟಕ ಸೇರಿದಂತೆ ದೇಶದಾದ್ಯಂತ ಸ್ಟೇಟ್‌ ಬ್ಯಾಂಕ್‌ ಇಂಡಿಯಾ (ಎಸ್‌ಬಿಐ)ದ ವಿವಿಧ ಪ್ರಾದೇಶಿಕ ಮತ್ತು ಶಾಖಾ ಕಚೇರಿಗಳಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು: ಪ್ರೊಬೇಷನರಿ ಆಫೀಸರ್

ಹುದ್ದೆಗಳ ಸಂಖ್ಯೆ: 2056

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿಪದವಿ ಪಡೆದಿರಬೇಕು.

ವೇತನ ಶ್ರೇಣಿ: ಇತರೆ ಭತ್ಯೆಗಳು ಸೇರಿದಂತೆ ಮಾಸಿಕ ₹ 23,700 ಮೂಲ ವೇತನ ಪಡೆಯಬಹುದು.

ವಯಸ್ಸು: ಕನಿಷ್ಠ 18 ವರ್ಷಗಳು, ಗರಿಷ್ಠ 30 ವರ್ಷಗಳ ವಯೋಮಿತಿಯಲ್ಲಿ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಆದಾಗ್ಯೂ ಸರ್ಕಾರಿ ನಿಯಮಾವಳಿಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ ₹ 750 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಾಗಿ ಎಸ್‌ಬಿಐ ಹೊರಡಿಸಿರುವ ಅಧಿಸೂಚನೆಯನ್ನು ನೋಡುವುದು.

ಅರ್ಜಿಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌https://www.sbi.co.in/web/careers ಗೆ ಲಾಗಿನ್‌ ಆಗಿ ಅರ್ಜಿಗಳನ್ನು ಸಲ್ಲಿಸಬಹುದು.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು 2021ರ ಅಕ್ಟೋಬರ್‌25 ಕೊನೆ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಎಸ್‌ಬಿಐ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ನೋಡಬಹುದು. ಈ ಕೆಳಗೆ ಅಧಿಸೂಚನೆ ಲಿಂಕ್‌ ನೀಡಲಾಗಿದೆ.

ವೆಬ್‌ಸೈಟ್‌:https://www.sbi.co.in/web/careers

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT