ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಮಿಕಂಡಕ್ಟರ್‌ ಕ್ಷೇತ್ರ: 1 ಕೋಟಿ ಉದ್ಯೋಗ ಸೃಷ್ಟಿ: ಅಶ್ವತ್ಥನಾರಾಯಣ

Last Updated 21 ಅಕ್ಟೋಬರ್ 2021, 20:05 IST
ಅಕ್ಷರ ಗಾತ್ರ

ಬೆಂಗಳೂರು: ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್‌ ವಲಯದಲ್ಲಿ ಮುಂದಿನ ವರ್ಷಗಳಲ್ಲಿ 1 ಕೋಟಿ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದುಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ವರ್ಚುವಲ್ ರೂಪದಲ್ಲಿ ನಡೆದ 16ನೇ ವರ್ಷದ ಅಖಿಲ ಭಾರತ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ಸ್ ಒಕ್ಕೂಟದ (ಐಇಎಸ್ಎ) ಅಧಿವೇಶನ ಉದ್ದೇಶಿಸಿ ಗುರುವಾರ ಮಾತನಾಡಿದ ಅವರು, ದೇಶದ ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್‌ (ಇಎಸ್‌ಡಿಎಂ) ರಫ್ತಿನಲ್ಲಿ ಕರ್ನಾಟಕದ ಪಾಲು ಶೇ 64 ರಷ್ಟಿದ್ದು, ಜಗತ್ತಿನ 85 ಹೆಚ್ಚು ಚಿಪ್ ವಿನ್ಯಾಸ ಕಂಪನಿಗಳು ಬೆಂಗಳೂರಿನಲ್ಲೇ ಇವೆ ಎಂದರು.

2025 ರ ವೇಳೆಗೆ ದೇಶದಲ್ಲಿ 220 ಶತಕೋಟಿ ಡಾಲರ್‌ ವಹಿವಾಟು ನಡೆಸುವ ಮಟ್ಟಕ್ಕೆ ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್‌ ಕ್ಷೇತ್ರ ಬೆಳೆಯಲಿದೆ. ಈ ಕ್ಷೇತ್ರದಲ್ಲಿ ಕರ್ನಾಟಕವನ್ನು ದೇಶದಲ್ಲೇ ಪ್ರಥಮ ಸ್ಥಾನಕ್ಕೆ ಕೊಂಡೊಯ್ಯಲಾಗುವುದು. ಈ ಬಗ್ಗೆ ನ. 17ರಿಂದ 21ರವರೆಗೆ ನಗರದಲ್ಲಿ ನಡೆಯುವ ‘ಬೆಂಗಳೂರು ಟೆಕ್‌ ಶೃಂಗ’ದಲ್ಲಿ ಆದ್ಯತೆ ಮೇರೆಗೆ ಚರ್ಚಿಸಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರ ಇಎಸ್‌ಡಿಎಂ ವಲಯವನ್ನು ಉತ್ತೇಜಿಸುವ ನೀತಿ ಯನ್ನು ಜಾರಿಗೆ ತಂದಿದೆ. ಈ ನಿಟ್ಟಿನಲ್ಲಿ ಕಂಪನಿಗಳಿಗೆ ಬಂಡವಾಳ ಹೂಡಿಕೆ ಮೇಲೆ ಸಬ್ಸಿಡಿ, ವಿದ್ಯುತ್‌ ದರದಲ್ಲಿ ರಿಯಾಯಿತಿ ಮತ್ತು ವಾರ್ಷಿಕ ವಹಿವಾಟಿನ ಮೇಲೆ ಪ್ರೋತ್ಸಾಹ ಧನ ಮುಂತಾದ ಸೌಲಭ್ಯಗಳನ್ನು ನೀಡ ಲಾಗುತ್ತಿದೆ ಎಂದು ಅವರು ವಿವರಿಸಿದರು.

ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್ ಅಡಿಯಲ್ಲಿ ಡಿಜಿಟಲ್‌ ಉದ್ಯಮಗಳನ್ನು ಉತ್ತೇಜಿಸಲಾಗು ತ್ತಿದೆ. ಇದಕ್ಕೆ ಬೆಂಗಳೂರಿನ ಐಐಐಟಿ ಸಹಯೋಗವಿದೆ. ಇದರಂತೆ ಮುಂದಿನ 9 ತಿಂಗಳಲ್ಲಿ 180 ಡಿಸೈನ್‌
ಎಂಜಿನಿಯರ್‌ಗಳನ್ನು ಸಿದ್ಧಗೊಳಿಸಲಾಗುವುದು. ‘ಬಿಯಾಂಡ್ ಬೆಂಗಳೂರು’ ಉಪಕ್ರಮದಡಿ ಹುಬ್ಬಳ್ಳಿ– ಧಾರವಾಡ ದಂತಹ ಎರಡನೇ ಸ್ತರದ ನಗರಗಳಲ್ಲಿ ಸೆಮಿಕಂಡಕ್ಟರ್‌ ಸ್ಟಾರ್ಟಪ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಗೊಳ್ಳುವಂತೆ ಮಾಡಬೇಕಾಗಿದೆ ಎಂದು ಅಶ್ವತ್ಥನಾರಾಯಣ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT