ಶಿರಸಿ: ‘ಗ್ರಾಮೀಣ ಭಾಗದ ಮಹಿಳೆಯರು ಹಾಗೂ ಯುವಜನರು ಅಣಬೆ ಕೃಷಿಯಂತಹ ಸ್ವಯಂ ಉದ್ಯೋಗಾಧಾರಿತ ತರಬೇತಿಗಳನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು’ ಎಂದು ತಾಲ್ಲೂಕು ಪಂಚಾಯಿತಿ ಇಒ ಚನ್ನಬಸಪ್ಪ ಹಾವಣಗಿ ಹೇಳಿದರು.

ಇಲ್ಲಿನ ರೋಟರಿ ಕ್ಲಬ್, ತಾಲ್ಲೂಕು ಪಂಚಾಯಿತಿ ಹಾಗೂ ಜಾನ್ಮನೆ ಪಂಚಮುಖಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಜಾನ್ಮನೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಎರಡು ದಿನಗಳ ಅಣಬೆ ಕೃಷಿ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ರೋಟರಿ ಕ್ಲಬ್ ನಿರಂತರವಾಗಿ ಸಮಾಜಮುಖಿ ಸೇವಾ ಕಾರ್ಯಗಳನ್ನು ನಡೆಸುತ್ತಿರುವುದು ಶ್ಲಾಘನೀಯವಾಗಿದ್ದು, ಮುಂದೆಯೂ ಇಂತಹ ಜನಪರ ಕಾರ್ಯಕ್ರಮಗಳು ಮುಂದುವರಿಯಲಿ’ ಎಂದು ತಿಳಿಸಿದರು.

ರೋಟರಿ ಕ್ಲಬ್ ಅಧ್ಯಕ್ಷ ಶ್ರೀನಿವಾಸ ನಾಯ್ಕ ಮಾತನಾಡಿ, ‘ಅಣಬೆ ಕೃಷಿಯು ಅತಿ ಕಡಿಮೆ ಜಾಗ, ಬಂಡವಾಳ ಹಾಗೂ ಕಡಿಮೆ ಅವಧಿಯಲ್ಲಿ ಆರಂಭಿಸಬಹುದಾದ ಲಾಭದಾಯಕ ಕೃಷಿಯಾಗಿದೆ. ಮಹಿಳೆಯರು ಇದನ್ನು ಸುಲಭವಾಗಿ ಅಳವಡಿಸಿಕೊಂಡು ಸ್ವಾವಲಂಬಿ ಜೀವನ ನಡೆಸಬಹುದು’ ಎಂದರು.

ಸಂಪನ್ಮೂಲ ವ್ಯಕ್ತಿ ದೀಪಕ ನಾಯ್ಕ ಅಣಬೆ ಕೃಷಿಯ ವಿಧಾನ ಹಾಗೂ ಮಾರುಕಟ್ಟೆ ವ್ಯವಸ್ಥೆ ಕುರಿತು ಮಾಹಿತಿ ನೀಡಿದರು. ಸಮಾರೋಪದಲ್ಲಿ ವಲಯ ಅರಣ್ಯಾಧಿಕಾರಿ ಉಷಾ ಕಬ್ಬೇರ ಅವರು ಶಿಬಿರಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿದರು.

ರೋಟರಿ ಸ್ಥಳೀಯ ಘಟಕದ ಕಾರ್ಯದರ್ಶಿ ಹರೀಶ ಹೆಗಡೆ, ಖಜಾಂಚಿ ವಿನಾಯಕ ಶೆಟ್, ಸತೀಶ ಭಟ್, ಜಾನ್ಮನೆ ಪಿಡಿಒ ಮಮತಾ ನಾಯ್ಕ, ಕಿರಣ ಭಟ್, ಜಯಮಾಲಾ ನಾಯ್ಕ, ಶಿಲ್ಪ ನಾಯ್ಕ, ಅಫ್ರಿದಿ, ಸಂದೀಪ ನಾಯ್ಕ, ವಿ.ಎಮ್ ಹೆಗಡೆ ಹಣಗಾರ, ನೇತ್ರಾವತಿ ಗೌಡ ಇದ್ದರು. ಕಿರಣ ಭಟ್ ನಿರ್ವಹಿಸಿದರು. ಚೇತನಾ ದೇವಾಡಿಗ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-20-941420983

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.