ರಿಪ್ಪನ್ಪೇಟೆ: ‘ರಾಜ್ಯ ಸರ್ಕಾರ ಯುವ ಜನರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ‘ಯುವನಿಧಿ’ ಯೋಜನೆಯ ಪ್ರಯೋಜನವನ್ನು ಪದವಿ ಪೂರ್ಣಗೊಳಿಸಿದ ಗ್ರಾಮೀಣ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸಲಹೆ ನೀಡಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡೆ, ರೋವರ್– ರೇಂಜರ್ಸ್, ಎನ್ಎಸ್ಎಸ್ ಚಟುವಟಿಕೆಗಳ ಸಮಾ ರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

‘ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಪೋಷಕರ ಹೊರೆ ತಗ್ಗಿಸಲು, ಉದ್ಯೋಗ ಲಭಿಸುವವರೆಗೆ ಸರ್ಕಾರದ ಸಹಾಯಧನ ಪಡೆದುಕೊಳ್ಳಿ’ ಎಂದು ನೀಡಿದರು.

‘ಉನ್ನತ ಶಿಕ್ಷಣದಿಂದ ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡು, ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಪಡೆದು ಕುಟುಂಬಕ್ಕೆ ಆಸರೆಯಾಗುವಂತಹ ಬದುಕು ಕಟ್ಟಿಕೊಂಡಲ್ಲಿ ಪಡೆದ ಶಿಕ್ಷಣ ಸಾರ್ಥಕವಾಗಲಿದೆ’ ಎಂದರು.

ಕಣ್ಣೂರು ಟಾಕಪ್ಪ ಮಾತನಾಡಿದರು. ಕಾಲೇಜಿನಲ್ಲಿ ಅತ್ಯುತ್ತಮ ಅಂಕ ಗಳಿಸಿದ ಹಾಗೂ ವಿವಿಧ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಪ್ರಾಂಶುಪಾಲ ಬಿ.ಎಲ್. ರಾಜು, ಸಿಡಿಸಿ ಉಪಾಧ್ಯಕ್ಷ ಶ್ರೀನಿವಾಸ ಆಚಾರ್, ಸದಸ್ಯರಾದ ಮಂಜುನಾಥ ಕಾಮತ್, ಫ್ಯಾನ್ಸಿ ರಮೇಶ್, ರಘು, ಪ್ರಾಧ್ಯಾಪಕ ಎಂ. ಕುಮಾರ, ರಜನಿಕಾಂತ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-42-1909592931

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.