ಸಿಂದಗಿ: ‘ಗ್ರಾಮೀಣ ಭಾಗದ ವಿದ್ಯಾವಂತರು ಕೃಷಿಯತ್ತ ಮುಖ ಮಾಡಬೇಕು. ಕೃಷಿಯನ್ನೇ ಉದ್ಯೋಗವನ್ನಾಗಿ ಮಾಡಿಕೊಂಡು ಅದರಲ್ಲಿ ಯಶಸ್ಸು ಹೊಂದಿ ಬೇರೆಯವರಿಗೆ ಉದ್ಯೋಗ ಕೊಡುವವರಾಗಬೇಕು’ ಎಂದು ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಚೇರಮನ್ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.

ನಗರದ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಹಾಗೂ ವಿ.ವಿ.ಸಾಲಿಮಠ ವಿಜ್ಞಾನ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ಮಾಣ ಎನ್ಜಿಒ ಸಂಸ್ಥೆ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

‘ಸರ್ಕಾರಿ ಮತ್ತು ಸರ್ಕಾರೇತರ ಉದ್ಯೋಗಿಗಳು ಜೊತೆ, ಜೊತೆಗೆ ಕೃಷಿಯತ್ತ ಆಸಕ್ತಿ ತೋರಿಸಿದರೆ ಆದಾಯ ದ್ವಿಗುಣಗೊಂಡು ರಾಷ್ಟ್ರೀಯ ವರಮಾನ ಹೆಚ್ಚುತ್ತದೆ. ಇದುವೇ ದೇಶಸೇವೆ‘ ಎಂದರು.

ಪ್ರಾಚಾರ್ಯ ಡಿ.ಎಂ.ಸರಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿರ್ಮಾಣ ಸಂಸ್ಥೆ ನಿರ್ದೇಶಕ ಯಹತೀಶ್ ಶ್ಯಾಮ ಅವರನ್ನು ಗೌರವಿಸಲಾಯಿತು. ಪ್ರಾಧ್ಯಾಪಕರಾದ ನಾಗರಾಜ ಮುರಗೋಡ, ರವಿ ಗೋಲಾ, ಪ್ರಕಾಶ ರಾಠೋಡ, ಭೀಮಾಶಂಕರ ಅರಳಗುಂಡಗಿ ಕಾರ್ಯಕ್ರಮ ನಿರ್ವಹಣೆ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-26-1231825867

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.