ಸಿಂದಗಿ: ನಗರದ ಸಾರಂಗಮಠದ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಚೇರ್ಮನ್ರಾದ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಸದಾಶಯದಂತೆ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಹಾಗೂ ವಿ.ವಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಿರ್ಮಾಣ್ ಸಂಸ್ಥೆಯ ಸಹಯೋಗದಲ್ಲಿ ಮೇ 11 ರಂದು ಮುಂಜಾನೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಟಾಟಾ, ಹೋಂಡಾ, ಟಿವಿಎಸ್, ಏಷಿಯನ್ ಪೇಂಟ್ಸ್, ಟೊಯೋಟಾ, ಆದಿತ್ಯ ಹೆಲ್ಥಕೇರ್, ಐ ಫೋನ್, ಷಾ ಹುಂಡೈ, ಲುಮ್ಯಾಕ್ಸ್, ಎಚ್.ಡಿ.ಎಫ್.ಸಿ ಬ್ಯಾಂಕ್, ಆರ್ಬಿಎಲ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಒಳಗೊಂಡು ಅನೇಕ ಬೆಂಗಳೂರಿನ ಪ್ರತಿಷ್ಠಿತ ಹಾಗೂ ಇನ್ನುಳಿದ 25ಕ್ಕಿಂತ ಅಧಿಕ ಕಂಪನಿಗಳು ಭಾಗವಹಿಸಲಿವೆ. ಬ್ಯಾಂಕಿಂಗ್, ಉತ್ಪಾದನೆ, ಆರೋಗ್ಯ, ವಾಹನೋದ್ಯಮ ಮತ್ತು ಸೇವಾ ಕ್ಷೇತ್ರಗಳಲ್ಲಿ ಒಟ್ಟು 5 ಸಾವಿರಕ್ಕಿಂತ ಅಧಿಕ ಉದ್ಯೋಗಾವಕಾಶಗಳಿವೆ. ಕೆಲವು ಕಂಪನಿಗಳು ಸ್ಥಳದಲ್ಲಿಯೇ ಉದ್ಯೋಗ ನೇಮಕಾತಿ ಆದೇಶಪತ್ರವೂ ನೀಡಲಿವೆ.

ಎಸ್.ಎಸ್.ಎಲ್.ಸಿ/ಪಿಯುಸಿ/ಐಟಿಐ/ಡಿಪ್ಲೋಮಾ/ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಭಾಗವಹಿಸಬಹುದು. ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯ ದಾಖಲೆಗಳು, ಆಧಾರ ಕಾರ್ಡ್, ಇತ್ತೀಚಿನ ಭಾವಚಿತ್ರ, ವೈಯಕ್ತಿಕ ಪರಿಚಯದೊಂದಿಗೆ ಪ್ರಚಾರ ಭಿತ್ತಿಪತ್ರದಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಸ್ಥಳದಲ್ಲಿ ನೋಂದಣಿ ಮಾಡಬಹುದು ಎಂದು ಮೇಳದ ಸಂಯೋಜಕರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗೆ ಪ್ರಕಾಶ ತೇಜು(9844994954), ಪ್ರಾಚಾರ್ಯ ಡಿ.ಎಂ.ಸರಶೆಟ್ಟಿ (9845610183) ಹಾಗೂ ಕಾಲೇಜಿನ ಐಕ್ಯೂಎಸಿ ಸಂಯೋಜಕ ಬಿ.ಆರ್. ಮಹಾಜನಶೆಟ್ಟಿ (9901379309) ಅವರನ್ನು ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-26-1656491572

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.