ಸಿಂಧನೂರು: ‘ಕೃಷಿ ಕೂಲಿಕಾರ್ಮಿಕರು ಸಂಘಟಿತರಾಗಿ ಸರ್ಕಾರದಿಂದ ಶಾಸನಬದ್ಧವಾಗಿ ದೊರೆಯುವ ಸೌಕರ್ಯಗಳನ್ನು ಪಡೆದುಕೊಳ್ಳಬೇಕು’ ಎಂದು ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ (ಆಯರ್ಲಾ) ರಾಜ್ಯ ಘಟಕದ ಸಂಚಾಲಕ ನಾಗರಾಜ ಪೂಜಾರ ಹೇಳಿದರು.

ತಾಲ್ಲೂಕಿನ ದಢೇಸುಗೂರು ಗ್ರಾಮದಲ್ಲಿ ಶುಕ್ರವಾರ ಆಯರ್ಲಾ ಗ್ರಾಮ ಘಟಕ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

‘ಕೃಷಿ ಸೇರಿ ಗ್ರಾಮೀಣ ಪ್ರದೇಶದ ಉತ್ಪಾದನೆಯಲ್ಲಿ ಪ್ರಮುಖ ಪಾತ್ರವಹಿಸುವ ಕೃಷಿ ಕೂಲಿಕಾರ ಕುಟುಂಬಗಳು ಇಂದಿಗೂ ಹಸಿವಿನಿಂದ ಬಳಲುತ್ತಿವೆ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಕೃಷಿ ಕೂಲಿಕಾರ್ಮಿಕರನ್ನು ಸಂಪೂರ್ಣ ನಿರ್ಲಕ್ಷಿಸಿದ್ದು, ಅಲ್ಪಸ್ವಲ್ಪ ಆಸರೆಯಾಗಿದ್ದ ನರೇಗಾ ಯೋಜನೆಯನ್ನು ಬದಲಿಸಿ ಉದ್ಯೋಗದ ಹಕ್ಕನ್ನೇ ಕಸಿದುಕೊಂಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐಎಂಎಲ್ ಲಿಬರೇಶನ್ ರಾಜ್ಯ ಸಮಿತಿ ಸದಸ್ಯ ವಿಜಯರ್ ದೊರೈರಾಜು ಮಾತನಾಡಿ, ‘ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ದುಡಿಯುವ ಜನವಿರೋದಿ ಕಾಯ್ದೆ, ಕಾನೂನುಗಳನ್ನು ಜಾರಿಗೆ ತಂದು, ತಾವು ಜನಪರ ಎಂದು ಬಿಂಬಿಸುತ್ತಿವೆ. ಇದನ್ನು ಗ್ರಾಮೀಣ ಪ್ರದೇಶದ ಕೂಲಿಕಾರರು ಅರಿತುಕೊಳ್ಳಬೇಕು’ ಎಂದು ಹೇಳಿದರು.

ಆಯರ್ಲಾ ಜಿಲ್ಲಾ ಘಟಕ ಸಹಸಂಚಾಲಕ ರಾಘವೇಂದ್ರ ಉಪ್ಪಳ, ಸಿಪಿಐಎಂಎಲ್ ಲಿಬರೇಶನ್ ತಾಲ್ಲೂಕು ಘಟಕ ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ, ಪಂಪಾಪತಿ ಉಪಸ್ಥಿತರಿದ್ದರು. ಆಯರ್ಲಾ ಜಿಲ್ಲಾ ಸಂಚಾಲಕ ಆರ್.ಎಚ್.ಕಲಮಂಗಿ ನಿರೂಪಿಸಿದರು.

ಗ್ರಾಮ ಘಟಕ ರಚನೆ: ದಢೇಸುಗೂರು ಆಯರ್ಲಾ ಗ್ರಾಮ ಘಟಕದ ನೂತನ ಅಧ್ಯಕ್ಷರಾಗಿ ವೀರಭದ್ರಪ್ಪ, ಉಪಾಧ್ಯಕ್ಷರಾಗಿ ತುಳಸಪ್ಪ, ಆರೀಫ್, ಕಾರ್ಯದರ್ಶಿಯಾಗಿ ಮಂಜಪ್ಪ, ಸಂಘಟನಾ ಕಾರ್ಯದರ್ಶಿಗಳಾಗಿ ಸುಂಕಪ್ಪ, ನಾಗೇಶ, ಶಿವಪ್ಪ, ಗೌರವಾಧ್ಯಕ್ಷರಾಗಿ ಮುದಿಯಪ್ಪ, ಖಜಾಂಚಿ ವಿನಯ್ ಸೇರಿದಂತೆ ಅನೇಕ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-32-62265124

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.