ಶಿರಸಿ: ‘ಮಹಿಳೆಯರು ಸ್ವಾವಲಂಬಿಯಾಗಲು ರೋಟರಿ ಸಂಸ್ಥೆ ಕೈಜೋಡಿಸಿರುವುದು ಅಭಿನಂದನೀಯ ಕಾರ್ಯವಾಗಿದೆ. ಇದರಿಂದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಕುಟುಂಬಕ್ಕೂ ಆರ್ಥಿಕ ಚೈತನ್ಯ ತುಂಬಲಿದ್ದಾರೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ನಗರದ ಪೂಗ ಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಶಿರಸಿ ಘಟಕ ಹಾಗೂ ರೋಟರಿ ಸೇವಾ ಪ್ರತಿಷ್ಠಾನದಿಂದಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ 100ಕ್ಕೂ ಅಧಿಕ ಹೊಲಿಗೆಯಂತ್ರಗಳನ್ನು ವಿತರಿಸಿ ಮಾತನಾಡಿದರು.

‘ಶಿರಸಿ ರೋಟರಿ ಕ್ಲಬ್ ರಾಜ್ಯದಲ್ಲೇ ಮಾದರಿಯಾಗಿದ್ದು, ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಪರಿವರ್ತನೆಯ ಕ್ಷೇತ್ರಗಳಲ್ಲಿ ಪರಿಣಾಮಕಾರಿ ಸೇವೆ ಸಲ್ಲಿಸುತ್ತಿದೆ. ಇಂತಹ ಕಾರ್ಯಗಳನ್ನು ಇತರೆ ಸಂಘ ಸಂಸ್ಥೆಗಳೂ ಸಹ ಅನುಸರಿಸಬೇಕು’ ಎಂದು ಹೇಳಿದರು.

‘ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಜಾರಿಗೊಳಿಸಿದ ಶಿಕ್ಷಣ ಸಿರಿ ಯೋಜನೆ ಅತ್ಯುತ್ತಮ ಕಾರ್ಯವಾಗಿದೆ. ರೋಟರಿ ನೆರವಿನಿಂದ ನಡೆದ ಈ ಕಾರ್ಯಕ್ರಮ ವಿದ್ಯಾರ್ಥಿಗಳ ಶೈಕ್ಷಣಿಕ ಫಲಿತಾಂಶ ಉತ್ತಮಗೊಳ್ಳಲು ಸಹಕಾರಿಯಾಗಿದೆ’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಶಿರಸಿ ಘಟಕದ ಅಧ್ಯಕ್ಷ ಶ್ರೀನಿವಾಸ ನಾಯ್ಕ ಮಾತನಾಡಿ, ‘ರೋಟರಿ ಕ್ಲಬ್ ವತಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಅಂಗನವಾಡಿ ಮಕ್ಕಳಿಗೆ ಆಸನ ವ್ಯವಸ್ಥೆ ಕಲ್ಪಿಸಲು ಕುರ್ಚಿ ವಿತರಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ರೂಪಿಸಲಾಗಿದೆ. ಪ್ರಸ್ತುತ ವಿತರಿಸಿದ ಹೊಲಿಗೆ ಯಂತ್ರಗಳು ಆಲೆಮನೆ ಉತ್ಸವದ ಉಳಿದ ಆದಾಯ ಹಾಗೂ ರೋಟರಿ ಸದಸ್ಯರ ಸಹಕಾರದಿಂದ ಅನುಷ್ಠಾನಗೊಳಿಸಲಾಗಿದೆ’ ಎಂದು ಹೇಳಿದರು.

ಡಾ. ದಿನೇಶ ಹೆಗಡೆ, ಸಂಧ್ಯಾ ನಾಯ್ಕ, ಸತೀಶ ಭಟ್ ನಾಡಗುಳಿ, ವಿನಾಯಕ ಶೇಟ್, ಡಾ.ಸುಮನ್ ಹೆಗಡೆ ಇದ್ದರು ಪ್ರೊ. ಕೆ.ಎನ್. ಹೊಸ್ಮನಿ ನಿರ್ವಹಿಸಿದರು. ರೋಟರಿ ಕಾರ್ಯದರ್ಶಿ ಹರೀಶ ಹೆಗಡೆ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-20-1195771858

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.