ಶಿರಸಿ: ‘ನಾಡಿನ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಅನನ್ಯವಾದುದು. ಬೆವರು ಸುರಿಸಿ ರಾಷ್ಟ್ರದ ಪ್ರಗತಿಗೆ ಅಡಿಪಾಯ ಹಾಕುವ ಪ್ರತಿಯೊಬ್ಬ ಕಾರ್ಮಿಕನಿಗೂ ಸಾಮಾಜಿಕ ಭದ್ರತೆ, ನ್ಯಾಯಯುತ ಸೌಲಭ್ಯ ಹಾಗೂ ಗೌರವಯುತ ಬದುಕು ಸಿಗಬೇಕು ಎನ್ನುವುದು ಸರ್ಕಾರದ ಪ್ರಮುಖ ಆಶಯವಾಗಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಅಭಿಪ್ರಾಯಪಟ್ಟರು.

ನಗರದ ಕೈಗಾರಿಕಾ ಭವನದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಕಾರ್ಮಿಕರು ಕೇವಲ ಒಂದು ವರ್ಗವಲ್ಲ, ಅವರು ಈ ರಾಷ್ಟ್ರದ ಶಕ್ತಿ. ಸಮಾಜದ ಮೂಲಸೌಕರ್ಯಗಳ ನಿರ್ಮಾಣದಲ್ಲಿ ಸದ್ದಿಲ್ಲದೇ ಶ್ರಮಿಸುವ ಕಟ್ಟಡ ಕಾರ್ಮಿಕರ ಸೇವೆ ಅನನ್ಯವಾದುದು’ ಎಂದರು.

‘ಅಸಂಘಟಿತ ವಲಯದ ಕಾರ್ಮಿಕರು ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗಬಾರದು. ಕಾರ್ಮಿಕ ಇಲಾಖೆಯ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಾಗಲು ಸಂಘಟನೆಗಳು ಕೊಂಡಿಯಾಗಿ ಶ್ರಮಿಸಬೇಕು. ಕಾರ್ಮಿಕರು ಮಕ್ಕಳ ಶಿಕ್ಷಣ, ಆರೋಗ್ಯ ರಕ್ಷಣೆ ಮತ್ತು ವಿಮಾ ಸೌಲಭ್ಯಗಳ ಕುರಿತು ಮಾಹಿತಿ ಪಡೆದು ಸದುಪಯೋಗ ಪಡಿಸಿಕೊಳ್ಳಬೇಕು. ಕಾರ್ಮಿಕರ ಬದುಕು ಹಸನಾದಾಗ ಮಾತ್ರ ದೇಶ ಸದೃಢವಾಗಲು ಸಾಧ್ಯ. ಆ ನಿಟ್ಟಿನಲ್ಲಿ ಅವರ ಕೈ ಬಲಪಡಿಸುವುದು ನಮ್ಮೆಲ್ಲರ ಜವಾಬ್ದಾರಿ’ ಎಂದು ತಿಳಿಸಿದರು. ಕಾರ್ಮಿಕ ಒಕ್ಕೂಟವು ಸಲ್ಲಿಸಿದ ವಿವಿಧ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದರು.

ಒಕ್ಕೂಟದ ಪದಾಧಿಕಾರಿಗಳು ಕಾರ್ಮಿಕರು ಎದುರಿಸುತ್ತಿರುವ ಸ್ಥಳೀಯ ಮತ್ತು ತಾಂತ್ರಿಕ ಸಮಸ್ಯೆಗಳ ಕುರಿತು ಶಾಸಕರಿಗೆ ಮನವಿ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಾರ್ಮಿಕ ಮುಖಂಡರು, ಒಕ್ಕೂಟದ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯಲ್ಲಿ ಅಸಂಘಟಿತ ವಲಯದ ಕಾರ್ಮಿಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-20-740780935

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.