ನವದೆಹಲಿ: ರೈಲ್ವೆ ಇಲಾಖೆಯ ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 432 ಟ್ರೇಡ್ ಅಪ್ರೆಂಟಿಸ್ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೆ ವಿಭಾಗಗಳಲ್ಲಿ ನೇಮಕಾತಿ ನಡೆಯಲಿದೆ. ಇದು ನೇರ ನೇಮಕಾತಿಯಾಗಿರುತ್ತದೆ.
ತರಬೇತಿ ಭತ್ಯೆ: ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು. ಮಾಸಿಕ ₹8,000 ರಿಂದ ₹15,200 ಭತ್ಯೆ ನೀಡಲಾಗುವುದು.
ವಯೋಮಿತಿ ಸಡಿಲಿಕೆ: 31 ಆಗಸ್ಟ್ 2020ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ನೇಮಕಾತಿ ವಿಧಾನ: ಎಸ್ಎಸ್ಎಲ್ಸಿ ಹಾಗೂ ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್ಸೈಟ್ https://secr.indianrailways.gov.in ಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಪಡೆಯಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.