ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಕರಿಗೆ ಉದ್ಯೋಗವಕಾಶ: ಸಿಎಪಿಎಫ್‌ನಲ್ಲಿ 24,369 ಕಾನ್‌ಸ್ಟೆಬಲ್‌ ಹುದ್ದೆಗಳು

ಅಕ್ಷರ ಗಾತ್ರ

ಕೇಂದ್ರ ಗೃಹ ಇಲಾಖೆ ಪ್ರಸ್ತುತ ಹಣಕಾಸು ವರ್ಷದಲ್ಲಿ ಬೃಹತ್ ನೇಮಕಾತಿಗೆ ಮುಂದಾಗಿದೆ. ಇಲಾಖೆಯ ಅಧೀನದಲ್ಲಿರುವ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ವತಿಯಿಂದ (CAPF) ವಿವಿಧ ಸಶಸ್ತ್ರ ಮೀಸಲು ಪಡೆಗಳಿಗೆ ಹಾಗೂ ಘಟಕಗಳಿಗೆ 24,369 ‘ಪುರುಷ ಮತ್ತು ಮಹಿಳಾ ಕಾನ್‌ಸ್ಟೆಬಲ್ ಜನರಲ್ ಡ್ಯೂಟಿ’ ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಪ್ರಾರಂಭಿಸಿದೆ. ಸಿಬ್ಬಂದಿ ನೇಮಕಾತಿ ಆಯೋಗದಿಂದ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಕೇಂದ್ರ ಸರ್ಕಾರದ ನೌಕರಿಗೆ ಸೇರಬೇಕೆಂಬ ಕನಸು ಹೊತ್ತಿರುವ ಯುವಸಮೂಹಕ್ಕೆ ಇದೊಂದು ಸದಾವಕಾಶ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಇದಕ್ಕಾಗಿ ‘ಸ್ಟಾಫ್ ಸೆಲೆಕ್ಸನ್ ಕಮಿಷನ್‌ನ ಅಧಿಕೃತ ವೆಬ್‌ಸೈಟ್‌ https://ssc.nic.in ಗೆ ಭೇಟಿ ನೀಡಿ, ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅ.27 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ನವೆಂಬರ್ 30 ಕೊನೆ ದಿನವಾಗಿದೆ. 18 ರಿಂದ 23 ವಯೋಮಾನದವರು ಅರ್ಜಿ ಸಲ್ಲಿಸಬಹುದು. ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ವಯಸ್ಸಿನಲ್ಲಿ ಸಡಿಲಿಕೆ ಇದೆ.

Caption
Caption

ಶೈಕ್ಷಣಿಕ ವಿದ್ಯಾರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಕನಿಷ್ಠ ವಿದ್ಯಾರ್ಹತೆ 10 ನೇ ತರಗತಿ ಅಥವಾ ಅದಕ್ಕೆ ತತ್ಸಮಾನ ಪರೀಕ್ಷೆ ಪಾಸಾಗಿರಬೇಕು.

ಆಯ್ಕೆ ಪ್ರಕ್ರಿಯೆ ಹೇಗಿದೆ?

ಒಟ್ಟು 4 ಹಂತಗಳಲ್ಲಿ ಆಯ್ಕೆ ನಡೆಯಲಿದೆ. ಮೊದಲ ಹಂತ; ಕಂಪ್ಯೂಟರ್ ಆಧಾರಿತ ಪರೀಕ್ಷೆ (ಬಹು ಆಯ್ಕೆಯ ಪ್ರಶ್ನೆಗಳು). ಈ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಒಳಪಡಬೇಕು. ಅಲ್ಲಿ ಉತ್ತೀರ್ಣರಾದಅಭ್ಯರ್ಥಿಗಳುವೈದ್ಯಕೀಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಮುಂದಿನ ಹಂತ ದಾಖಲಾತಿ ಪರಿಶೀಲನೆ. ಬಳಿಕ ನೇಮಕಾತಿ ಆದೇಶದ ಪತ್ರ ಅಭ್ಯರ್ಥಿಗಳ ಕೈ ಸೇರಲಿದೆ. ಪರೀಕ್ಷೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ ಆಗಿದ್ದು, ಎಸ್‌ಎಸ್‌ಸಿ ಈ ಪರೀಕ್ಷೆಯನ್ನು ಆಯೋಜಿಸುತ್ತದೆ. ಜನವರಿಯಲ್ಲಿ ಪರೀಕ್ಷೆ ನಡೆಯುವುದಾಗಿಪ್ರಕಟಿಸಲಾಗಿದೆ. ಅಧಿಕೃತ ದಿನಾಂಕವನ್ನು ವೆಬ್‌ಸೈಟ್‌ನಲ್ಲಿ ತಿಳಿಸಲಾಗುತ್ತದೆ. ಅಲ್ಲದೇ ಪರೀಕ್ಷೆಗೆ ಹಾಗೂ ದೈಹಿಕ ಪರೀಕ್ಷೆಗೆ ಕರೆಪತ್ರಗಳು ಅಭ್ಯರ್ಥಿಗಳ ಅಂಚೆ ವಿಳಾಸಕ್ಕೆ ಬರಲಿವೆ. ಪರೀಕ್ಷಾ ಪಠ್ಯಕ್ರಮ, ಹುದ್ದೆಗಳ ವಿವರ, ಇತರ ಸಂಪೂರ್ಣ ವಿವರಗಳಿಗಾಗಿ ಅಭ್ಯರ್ಥಿಗಳು https://ssc.nic.in ನೋಡಬಹುದು.

ವೇತನ ಶ್ರೇಣಿ ಏನಿದೆ?

ಸಿಎಪಿಎಫ್‌ನ ವಿವಿಧ ವಿಭಾಗಗಳಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಚಾಲ್ತಿ ನಿಯಮಾನುಸಾರ ₹18,000 ದಿಂದ ₹56,900 ವೇತನ ಪಡೆಯಲಿದ್ದಾರೆ.

ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ

ಸಿಎಪಿಎಫ್‌ನ ಈ ಹುದ್ದೆಗಳಿಗೆ ನಡೆಯುತ್ತಿರುವಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಂಗ್ಲ ಹಾಗೂ ಹಿಂದಿ ಭಾಷೆಯಲ್ಲಿ ಬರೆಯಲು ಮಾತ್ರ ಅವಕಾಶವಿದೆ. ಇದರಿಂದ ಕನ್ನಡ ಸೇರಿದಂತೆ ಇತರ ಪ್ರಾದೇಶಿಕ ಭಾಷೆಯ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ ಎಂಬ ಕೂಗು ಕೇಳಿ ಬಂದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಯಾಗುತ್ತಿದ್ದುಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಅನೇಕ ಕನ್ನಡಪರ ಸಂಘಟನೆಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT