ಭಾನುವಾರ, ಮೇ 22, 2022
26 °C

SSC: ಸಿಎಚ್‌ಎಸ್‌ಎಲ್‌–2 ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಜನವರಿ ತಿಂಗಳಲ್ಲಿ ಕಂಬೈನ್ಡ್‌ ಸೆಕೆಂಡರಿ ಲೆವೆಲ್-2 ಪರೀಕ್ಷೆ ನೇಮಕಾತಿಯ ಪರೀಕ್ಷೆ ನಡೆಸಲಿದೆ. ಈಗಾಗಲೇ ಪರೀಕ್ಷೆಯ ವೇಳಾಪಟ್ಟಿಯನ್ನು ಎಸ್‌ಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.

2021ನೇ ಸಾಲಿನ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದ ಪರೀಕ್ಷೆ ಇದಾಗಿದ್ದು,  ಎಸ್‌ಎಸ್‌ಎಸಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ವೇಳಾಪಟ್ಟಿ...

1) ಕಂಬೈನ್ಡ್‌ ಸೆಕೆಂಡರಿ ಲೆವೆಲ್-2 ಪರೀಕ್ಷೆ(ಸಿಎಚ್‌ಎಸ್‌ಎಲ್‌). -28-02-2022 ಹಾಗೂ 29-01-2022 

ಈ ಪರೀಕ್ಷೆ ವೇಳಾಪಟ್ಟಿ ಸರ್ಕಾರದ ಮಾರ್ಗಸೂಚಿಗಳು ಹಾಗೂ ಕೊರೊನಾ ಪರಿಸ್ಥಿತಿಯ ನಿರ್ಧಾರಗಳಿಗೆ ಒಳಪಟ್ಟಿರುತ್ತದೆ. ಅಭ್ಯರ್ಥಿಗಳ ಹಿತದೃಷ್ಟಿಯಿಂದ ತುರ್ತು ಸಂದರ್ಭಗಳಲ್ಲಿ ಪರೀಕ್ಷೆ ವೇಳಾಪಟ್ಟಿ ಬದಲಾಗುವ ಸಾಧ್ಯತೆಗಳು ಇರುತ್ತವೆ ಎಂದು ಎಸ್‌ಎಸ್‌ಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಈ ಕೆಳಗಿನ ವೆಬ್‌ಸೈಟ್‌ ನೋಡುವುದು. 

ವೆಬ್‌ಸೈಟ್‌: https://ssc.nic.in

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು