ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲ ವೇತನ ₹21,700: SSLC ವಿದ್ಯಾರ್ಹತೆ; 25,271 ಕಾನ್‌ಸ್ಟೆಬಲ್‌ ನೇಮಕಾತಿ ಅರ್ಜಿ

ಅಕ್ಷರ ಗಾತ್ರ

ಬೆಂಗಳೂರು: ವಿವಿಧ ಕೇಂದ್ರೀಯ ಪೊಲೀಸ್ ಪಡೆಗಳಲ್ಲಿನ ಕಾನ್‌ಸ್ಟೆಬಲ್ ಹುದ್ದೆಗಳಿಗೆ ರಾಷ್ಟ್ರವ್ಯಾಪಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೇಂದ್ರೀಯ ಪೊಲೀಸ್ ಪಡೆಗಳಾದ ಗಡಿ ಭದ್ರತಾ ಪಡೆ (ಬಿಎಸ್‌ಎಫ್), ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್), ಅಸ್ಸಾಂ ರೈಫಲ್ಸ್, ಇಂಡೋ ಟಿಬೆಟನ್ ಗಡಿ ಪೊಲೀಸ್ ಪಡೆ (ಐಟಿಬಿಪಿ)ಯಲ್ಲಿ ಕಾನ್‌ಸ್ಟೆಬಲ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.ಸ್ಟಾಫ್ ಸೆಲೆಕ್ಷನ್ ಕಮಿಷನ್‌ (ಎಸ್‌ಎಸ್‌ಸಿ) ನೇಮಕಾತಿ ಪ್ರಕ್ರಿಯೆಯನ್ನು ನಡೆಸಲಿದೆ.

ಹುದ್ದೆಗಳ ವಿವರ: ಒಟ್ಟು 25,271 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.

1) ಗಡಿ ಭದ್ರತಾ ಪಡೆ –7545
2) ಕೇಂದ್ರ ಕೈಗಾರಿಕಾ ಭದ್ರತಾ ಪಡೆ –8464
3) ಸಶಸ್ತ್ರ ಸೀಮಾ ಬಲ–3806
4) ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ –1431
5) ಅಸ್ಸಾಂ ರೈಫಲ್ಸ್‌ –3785
6) ಸೆಕ್ರೇಟರಿಯಟ್ ಸೆಕ್ಯೂರಿಟಿ ಫೋರ್ಸ್‌ –240

ವಿದ್ಯಾರ್ಹತೆ: ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವೇತನ ಶ್ರೇಣಿ: ಮಾಸಿಕ ₹21,700 – ₹ 69,100 (ವಿವಿಧ ಭತ್ಯೆಗಳುಸೇರಿದಂತೆ)

ವಯಸ್ಸು: ಕನಿಷ್ಠ 18 ವರ್ಷ, ಗರಿಷ್ಠ 23 ವರ್ಷ

ವಯೋಮಿತಿ ಸಡಿಲಿಕೆ: ಜುಲೈ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 23 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ನೇಮಕಾತಿ ವಿಧಾನ: ದೈಹಿಕ ಪರೀಕ್ಷೆ ಹಾಗೂ ಕಂಪ್ಯೂಟರ್‌ ಆಧಾರಿತ ಲಿಖಿತ ಪರೀಕ್ಷೆಯ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ:ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹ 100. ಎಸ್‌ಸಿ/ಎಸ್‌ಟಿ/ಮಾಜಿ ಸೈನಿಕಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌ https://ssc.nic.in ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಪಡೆಯಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 31 ಆಗಸ್ಟ್‌, 2021

ವೆಬ್‌ಸೈಟ್‌:https://ssc.nic.in/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT