ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSC: ಸಿಎಚ್‌ಎಸ್‌ಎಲ್‌ ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟ

Last Updated 4 ಜನವರಿ 2022, 11:48 IST
ಅಕ್ಷರ ಗಾತ್ರ

ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಸಿಎಚ್‌ಎಸ್‌ಎಲ್‌ (ಟೈಯರ್‌–1) ನೇಮಕಾತಿಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ. ಎಸ್‌ಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ರಿಸಲ್ಟ್‌ ಬಿಡುಗಡೆ ಮಾಡಿದೆ.

2020ನೇ ಸಾಲಿನನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದ ಪರೀಕ್ಷೆಇದಾಗಿದ್ದು, ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಫಲಿತಾಂಶ ಚೆಕ್‌ ಮಾಡಿಕೊಳ್ಳಬಹುದು. ನೋಂದಣಿ ಸಂಖ್ಯೆ ನಮೂದಿಸಿ ಫಲಿತಾಂಶ ನೋಡಬಹುದು.

ಮಂದಿನ ಹಂತದ ವೇಳಾಪಟ್ಟಿಯನ್ನು ನಂತರದ ದಿನಗಳಲ್ಲಿ ಪ್ರಕಟಿಸಲಾಗುವುದು. ಅಭ್ಯರ್ಥಿಗಳ ಹಿತದೃಷ್ಟಿಯಿಂದ ತುರ್ತು ಸಂದರ್ಭಗಳಲ್ಲಿ ಪರೀಕ್ಷೆ ವೇಳಾಪಟ್ಟಿ ಬದಲಾಗುವ ಸಾಧ್ಯತೆಗಳು ಇರುತ್ತವೆ ಎಂದು ಎಸ್‌ಎಸ್‌ಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಈ ಕೆಳಗಿನ ವೆಬ್‌ಸೈಟ್‌ ನೋಡುವುದು.

ವೆಬ್‌ಸೈಟ್‌: https://ssc.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT