ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿವಿಲ್‌ ಸೇವೆಗಳ ನೇಮಕಾತಿ: ವಯೋಮಿತಿ ಸಡಿಲಿಕೆ

Published : 20 ಸೆಪ್ಟೆಂಬರ್ 2024, 23:45 IST
Last Updated : 20 ಸೆಪ್ಟೆಂಬರ್ 2024, 23:45 IST
ಫಾಲೋ ಮಾಡಿ
Comments

ಬೆಂಗಳೂರು: ರಾಜ್ಯ ಸಿವಿಲ್‌ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್‌–ಸಿ ಮತ್ತು ಗ್ರೂಪ್‌–ಬಿ ಹುದ್ದೆಗಳ ನೇರ ನೇಮಕಾತಿಯಡಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷ ಸಡಿಲ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಭರ್ತಿ ಮಾಡಲು ಈಗಾಗಲೇ ಹೊರಡಿಸಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಈ ಆದೇಶ ಅನ್ವಯವಾಗಲಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 3.10.2024 ಕ್ಕೆ ಆಯಾ ಮೀಸಲಾತಿಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ ಮೀರಿರಬಾರದು. ಸಾಮಾನ್ಯ ವರ್ಗದವರಿಗೆ ಕನಿಷ್ಠ 18 ವರ್ಷಗಳು, ಗರಿಷ್ಠ 38 ವರ್ಷಗಳು, ಪ್ರವರ್ಗ 2ಎ,2ಬಿ,3ಎ ಮತ್ತು 3ಬಿ ಗರಿಷ್ಠ 41 ವರ್ಷಗಳು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ1 ಗರಿಷ್ಠ 43 ವರ್ಷಗಳು.

ಅಲ್ಲದೇ, ಕೆಪಿಎಸ್‌ಸಿ 2023–24 ನೇ ಸಾಲಿನ ಗ್ರೂಪ್‌–ಸಿ ವೃಂದದ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೇಮಕ ಸಂಬಂಧ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯನ್ನು ಮೂರು ವರ್ಷ ಸಡಿಲಿಸಿ ಆದೇಶ ಹೊರಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು 18.09.2024 ರಿಂದ 3.10.24 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT