ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯ ಮಂಡಳಿಯು ಬೆಂಗಳೂರು, ಬೆಳಗಾವಿ ಮತ್ತು ಕಲಬುರ್ಗಿ ಪೀಠಗಳಲ್ಲಿ ಖಾಲಿಯಿರುವ ಏಳು ಶೀಘ್ರಲಿಪಿಗಾರ(ಸ್ಟೆನೊಗ್ರಾಫರ್) ಹುದ್ದೆಗಳ ಭರ್ತಿಗಾಗಿ ಆರ್ಜಿ ಆಹ್ವಾನಿಸಿದೆ.

ಈ ಕುರಿತು ಅಧಿಸೂಚನೆ ಹೊರಡಿಸಿದ್ದು (ದಿನಾಂಕ: ಜ 6, 2023), ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಜನವರಿ 31 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಶೈಕ್ಷಣಿಕ ವಿದ್ಯಾರ್ಹತೆ:

ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲಭಾಷಾ ಬೆರಳಚ್ಚು ಪರೀಕ್ಷೆ ಪ್ರೌಢದರ್ಜೆ(ಸೀನಿಯರ್ ಗ್ರೇಡ್) ಹಾಗೂ ಇಂಗ್ಲಿಷ್ ಮತ್ತು ಕನ್ನಡ ಭಾಷೆಯ ಶೀಘ್ರಲಿಪಿ ಪ್ರೌಢದರ್ಜೆ(ಸೀನಿಯರ್ ಗ್ರೇಡ್) ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅಧಿಕೃತ ಜಾಲತಾಣ www. Ksat.karnataka.gov.in ನಿಂದ ಡೌನ್ಲೋಡ್ ಮಾಡಿಕೊಳ್ಳಬೇಕು(ಉಳಿದ ಮೂಲ ವೃಂದಕ್ಕೆ ನಿಗದಿಪಡಿಸಿರುವ ಅರ್ಜಿಯನ್ನು ಮಾತ್ರ ಡೌನ್ಲೋಡ್ ಮಾಡಿಕೊಳ್ಳಬೇಕು).

ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಮಂಡಳಿಯು ನಿಗದಿಪಡಿಸಿರುವ ನಮೂನೆಯಲ್ಲಿಯೇ ಅರ್ಜಿ ಸಲ್ಲಿಸಬೇಕು. ಇತರೆ ಯಾವುದೇ ನಮೂನೆಯಲ್ಲಾಗಲಿ ಅಥವಾ ಬೆರಳಚ್ಚು/ಝೆರಾಕ್ಸ್ ಪ್ರತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.

ಭರ್ತಿ ಮಾಡಿದ ಅರ್ಜಿಗಳನ್ನು ವಿಲೇಖನಾಧಿಕಾರಿಗಳು, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು – 560009 ಇಲ್ಲಿಗೆ ಸಲ್ಲಿಸಬೇಕು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹150. ಎಸ್ಸಿ, ಎಸ್ಟಿ, ಪ್ರವರ್ಗ–1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಿದೆ. ಅರ್ಜಿ ಶುಲ್ಕವನ್ನು ರಿಜಿಸ್ಟ್ರಾರ್, ಕೆಎಸ್ಎಟಿ, 7ನೇ ಮಹಡಿ, ಕಂದಾಯಭವನ, ಕೆ.ಜಿ.ರಸ್ತೆ ಬೆಂಗಳೂರು ಇವರ ಹೆಸರಿನಲ್ಲಿ ಡಿಡಿ/ ಐಪಿಒ ಮೂಲಕ ಸಲ್ಲಿಸಬೇಕು.

ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು. ಎಸ್.ಸಿ, ಎಸ್ಟಿ , ಪ್ರವರ್ಗ –1 ರ ಅಭ್ಯರ್ಥಿಗಳಿಗೆ 40 ವರ್ಷಗಳು, 2ಎ, 2ಬಿ,3ಎ,3ಬಿ ಅಭ್ಯರ್ಥಿಗಳಿಗೆ 38 ವರ್ಷಗಳನ್ನು ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ: ಮಾಸಿಕ ₹30350 ರಿಂದ ₹58,250

ಹೆಚ್ಚಿನ ಮಾಹಿತಿಗೆ www.ksat.karnataka.gov.in ಜಾಲತಾಣಕ್ಕೆ ಭೇಟಿ ನೀಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.