ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುರೇನಿಯಂ ಕಾರ್ಪೊರೇಶನ್‌ ಇಂಡಿಯಾ: 242 ಹುದ್ದೆಗಳಿಗೆ ಅರ್ಜಿ

Last Updated 16 ಅಕ್ಟೋಬರ್ 2021, 6:30 IST
ಅಕ್ಷರ ಗಾತ್ರ

ಯುರೇನಿಯಂ ಕಾರ್ಪೊರೇಶನ್‌ ಆಫ್‌ ಇಂಡಿಯಾ ಲಿಮಿಟೆಡ್ (UCIL)ನಲ್ಲಿ ಖಾಲಿ ಇರುವ242 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: ಫಿಟ್ಟರ್, ಟರ್ನರ್‌, ಎಲೆಕ್ಟ್ರಿಷಿಯನ್, ಮೆಕ್ಯಾನಿಸ್ಟ್‌, ಪ್ಲಂಬರ್‌, ಪೇಂಟರ್‌.

ಒಟ್ಟು ಹುದ್ದೆಗಳ ಸಂಖ್ಯೆ: 242

ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಎಸ್ಸೆಸ್ಸೆಲ್ಸಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

ವಯೋಮಿತಿ ಸಡಿಲಿಕೆ: ಅಕ್ಟೋಬರ್‌ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದವರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ನೇಮಕಾತಿ ವಿಧಾನ: ಎಸ್ಸೆಸ್ಸೆಲ್ಸಿ ಹಾಗೂ ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್‌ ಲಿಸ್ಟ್‌ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌http://www.ucil.gov.in ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಪಡೆಯಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 29, ಅಕ್ಟೋಬರ್‌ 2021

ವೆಬ್‌ಸೈಟ್‌:http://www.ucil.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT