ಉಡುಪಿ: ‘ನಮ್ಮ ದೇಶದ 140 ಕೋಟಿ ಜನಸಂಖ್ಯೆಯಲ್ಲಿ ಶೇ 40ರಷ್ಟು 25 ವರ್ಷದೊಳಗಿನ ಯುವ ಜನರು ಇದ್ದಾರೆ. ಅವರೇ ನಮ್ಮ ದೇಶದ ಆಸ್ತಿಯಾಗಿದ್ದಾರೆ. ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆ ಉದ್ಯೋಗ ಕೂಡ ಕಲ್ಪಿಸುವುದು ನಮ್ಮ ಜವಾಬ್ದಾರಿಯಾಗಿದೆ’ ಎಂದು ಮಣಿಪಾಲದ ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್ ಹೇಳಿದರು.

ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯುತ್ತಿರುವ ಮಹಾರುದ್ರಯಾಗದ ಪ್ರಯುಕ್ತ ಕೊಡವೂರು ವಿಪ್ರಶ್ರೀ ಸಭಾಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಉತ್ತಮ ಉದ್ಯೋಗ ಸಿಕ್ಕಿದರೆ ಯುವಜನತೆಯ ಭವಿಷ್ಯ ಕೂಡ ಉತ್ತಮವಾಗಿರಲು ಸಾಧ್ಯವಾಗುತ್ತದೆ. ನಮ್ಮ ದೇಶದಲ್ಲಿ ಶೇ 70ರಷ್ಟು ಜನ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿದ್ದಾರೆ. ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರುವುದರಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯವಾಗಲಿದೆ ಎಂದರು.

ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಲಿಂಗ ಸಮಾನತೆ ಸಾಧಿಸಬಹುದು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮಹಾರುದ್ರಯಾಗ ಸಮಿತಿ ಕಾರ್ಯಾಧ್ಯಕ್ಷ ಪ್ರಸಾದ್ರಾಜ್ ಕಾಂಚನ್ ಮಾತನಾಡಿ, ‘ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಯ ಯುವಜನತೆ ಸರಿಯಾದ ಉದ್ಯೋಗ ಸಿಗದೆ ಹೊರರಾಜ್ಯ, ಹೊರ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಅಂತಹ ಸಂದರ್ಭದಲ್ಲಿ ನಮ್ಮಲ್ಲಿನ ಪ್ರತಿಭೆಗಳಿಗೆ ನಮ್ಮಲ್ಲಿಯೇ ಉದ್ಯೋಗ ನೀಡುವುದರಿಂದ ನಮ್ಮ ಜಿಲ್ಲೆ ಆರ್ಥಿಕವಾಗಿ ಮತ್ತಷ್ಟು ಪ್ರಗತಿ ಸಾಧಿಸಲಿದೆ. ಈ ನಿಟ್ಟಿನಲ್ಲಿ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ’ ಎಂದರು.

‘ಉದ್ಯೋಗಾವಾಶಗಳ ಜೊತೆಗೆ ಸ್ಥಳೀಯವಾಗಿ ಬೇಡಿಕೆ ಇರುವ ಉದ್ಯಮಗಳ ಬಗ್ಗೆಯೂ ಯುವಜನತೆಗೆ ಮಾಹಿತಿ ನೀಡುವ ಕಾರ್ಯ ಮಾಡಲಾಗುತ್ತದೆ. ಕರಾವಳಿಯಲ್ಲಿ ಈಗ ಪ್ರವಾಸೋದ್ಯಮ ಕ್ಷೇತ್ರ ತುಂಬಾ ವೇಗವಾಗಿ ಬೆಳೆಯುತ್ತಿದೆ. ಅದರಲ್ಲಿ ವಿಪುಲ ಅವಕಾಶ ಕೂಡ ಇದೆ. ಅದನ್ನು ನಮ್ಮ ಸ್ಥಳೀಯ ಯುವಜನತೆ ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು’ ಎಂದು ಅವರು ತಿಳಿಸಿದರು.

ಶ್ರೀನಿವಾಸ್ ವಿ.ವಿ. ಇಂಟರ್ನ್ಯಾಷನಲ್ ಕೊಲೆಬ್ರೆಷನ್ಸ್ ನಿರ್ದೇಶಕಿ ದಿವ್ಯಾರಾಣಿ ಪ್ರದೀಪ್ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತರಿಗೆ ಉದ್ಯೋಗ ಕಲ್ಪಿಸುವುದು ಉದ್ಯೋಗ ಮೇಳದ ಉದ್ದೇಶವಾಗಿದೆ. ಇದರಲ್ಲಿ 70 ಕಂಪನಿಗಳು ಭಾಗವಹಿಸಿದ್ದು, ಸುಮಾರು 7 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶಗಳನ್ನು ಒದಗಿಸಲಿದೆ ಎಂದು ತಿಳಿಸಿದರು.

ಎಚ್ಪಿಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನ ಅಧ್ಯಕ್ಷ ಹರಿಪ್ರಸಾದ್ ರೈ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಕೊಡವೂರು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಉಪಸ್ಥಿತರಿದ್ದರು. ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-28-838107898

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.