ಉಡುಪಿ: ನೇತ್ರಜ್ಯೋತಿ ಕಾಲೇಜು ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ವತಿಯಿಂದ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಜರುಗಿತು.

ಕಾರ್ಮಿಕ ಅಧಿಕಾರಿ ಕಮಲ್ ಶಾ ಅಲ್ತಾಫ್ ಅಹ್ಮದ್ ಪಾಲ್ಗೊಂಡಿದ್ದರು. ಕುಂದಾಪುರದ ಕಾರ್ಮಿಕ ಅಧಿಕಾರಿ ವಿಜಯೇಂದ್ರ ಅವರು ಕಾರ್ಮಿಕ ಕಾನೂನುಗಳ ಬಗ್ಗೆ ಹಾಗೂ ಉಡುಪಿಯ ಕಾರ್ಮಿಕ ಅಧಿಕಾರಿ ಮಲ್ಲಿಕ್ ಪ್ರಸಾದ್ ಅವರು ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಬಗ್ಗೆ ಮಾತನಾಡಿದರು.

ಅಧ್ಯಕ್ಷತೆಯನ್ನು ನೇತ್ರಜ್ಯೋತಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ. ಕೃಷ್ಣ ಪ್ರಸಾದ್ ಕೂಡ್ಲು ವಹಿಸಿದ್ದರು.

ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಸಿಒಒ ಡಾ. ಗೌರಿ ಪ್ರಭು ಉಪಸ್ಥಿತರಿದ್ದರು. ಅನಿಷಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪ್ರಸಾದ್ ನೇತ್ರಾಲಯದ ಆಡಳಿತಾಧಿಕಾರಿ ಮಧ್ವ ವಲ್ಲಭ ಸ್ವಾಗತಿಸಿದರು.

ಮಾಧವ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆಯ ಕರ್ಮಚಾರಿಗಳಾದ ಆನಂದ, ಮಹದೇವ್, ಸುರೇಶ್, ರಾಜೇಶ್ ಹಾಗೂ ನೇತ್ರಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯ ಉಡುಪಿಯ ಸ್ವಚ್ಛತಾ ಸಿಬ್ಬಂದಿ ಜಯಂತಿ, ವನಜ, ಸುಮಾ, ಲಲಿತಾ ಮತ್ತು ವಿನಯ ಅವರನ್ನು ಸನ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-28-1550291827

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.