ಉಜಿರೆ: ‘ಉದ್ಯೋಗದಾತರು ಮತ್ತು ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳ ಮಧ್ಯೆ ಅಂತರ ಹಾಗೂ ಮಾಹಿತಿಯ ಕೊರತೆಯಿಂದಾಗಿ ಅರ್ಹ ವಿದ್ಯಾರ್ಥಿಗಳು ಸೂಕ್ತ ಉದ್ಯೋಗ ಪಡೆಯುವಲ್ಲಿ ವಿಫಲರಾಗುತ್ತಾರೆ. ಇದಕ್ಕೆ ಪರಿಹಾರೋಪಾಯವಾಗಿ ಉಜಿರೆ ಎಸ್ಡಿಎಂ ಕಾಲೇಜಿಗೆ ನೂರಕ್ಕೂ ಅಧಿಕ ಸಂಸ್ಥೆಗಳನ್ನು ಆಹ್ವಾನಿಸಿ ಎರಡು ದಿನ ಉದ್ಯೋಗ ಮೇಳ ಆಯೋಜಿಸಲಾಗಿದೆ’ ಎಂದು ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್. ಸತೀಶ್ಚಂದ್ರ ಹೇಳಿದರು.

ಉಜಿರೆ ಎಸ್ಡಿಎಂ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿಡ್ಲೆಯ ಅಗ್ರಿಲೀಫ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವಿನಾಶ್ ರಾವ್ ಮಾತನಾಡಿ, ‘ಉದ್ಯೋ ಗಾಕಾಂಕ್ಷಿಗಳು ಉತ್ತಮ ಕೌಶಲ ಬೆಳೆಸಿಕೊಳ್ಳಬೇಕು. ಕ್ಷಿಪ್ರ ಬದಲಾವಣೆಗಳ ಬಗ್ಗೆ ಯುವಜನತೆ ಗಮನ ಹರಿಸಬೇಕು’ ಎಂದು ಸಲಹೆ ನೀಡಿದರು.

ಎಸ್ಡಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ. ವಿಶ್ವನಾಥ, ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಟಿ. ಅಶೋಕ ಕುಮಾರ್, ಪಾಲಿಟೆಕ್ನಿಕ್ನ ಪ್ರಾಂಶು ಪಾಲ ಸಂತೋಷ, ನಾಗರಾಜ ಪೂಜಾರಿ, ಸುಬ್ರಹ್ಮಣ್ಯ ತೋಳ್ಪಾಡಿತ್ತಾಯ, ಅಮರೇಶ್ ಹೆಬ್ಬಾರ್ ಭಾಗವಹಿಸಿದ್ದರು.

ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮಹೇಶ ಕುಮಾರ್ ಶೆಟ್ಟಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-29-1950377041

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.