ಉಜಿರೆ: ‘ಕೈಗಾರಿಕಾ ಕ್ಷೇತ್ರದಲ್ಲಿ ಮಹಿಳೆಯರಿಗೂ ವಿಪುಲ ಅವಕಾಶಗಳಿವೆ. ಆಸಕ್ತ ಮಹಿಳೆಯರ ಸಂಖ್ಯೆ ಕಡಿಮೆ ಇದೆ. ಮುಂದಿನ ವರ್ಷದಿಂದ ಕೈಗಾರಿಕಾ ಕ್ಷೇತ್ರದಲ್ಲಿ ಹೊಸ ಉದ್ಯಮ ಆರಂಭಿಸುವ ಮಹಿಳೆಯರಿಗೆ ತಮ್ಮ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ 21 ದಿನಗಳ ಉಚಿತ ತರಬೇತಿ ನೀಡಲಾಗುವುದು’ ಎಂದು ಸ್ನೇಯ್ಡರ್ ಎಲೆಕ್ಟ್ರಿಕ್ ಫೌಂಡೇಶನ್ ಆಫ್ ಇಂಡಿಯಾ ಕಂಪನಿಯ ಉಪಾಧ್ಯಕ್ಷ ದೇವದಾಸ್ ಶೆಟ್ಟಿ ಹೇಳಿದರು.

ವೇಣೂರಿನಲ್ಲಿ ಎಸ್ಡಿಎಂ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನವೀಕೃತ ಕೈಗಾರಿಕಾ ಸಮಗ್ರ ಉಪಕರಣಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

50 ವಿದ್ಯಾರ್ಥಿಗಳಿಗೆ ತಮ್ಮ ಕಂಪೆನಿ ವತಿಯಿಂದ ಟೂಲ್ಕಿಟ್ ವಿತರಿಸಿದರು. ಕಂಪೆನಿಯ ಡಿಜಿಎಂ ಪ್ರಶಾಂತ ಶೆಟ್ಟಿ ಮಾತನಾಡಿದರು.

ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ತಮಗೆ ಸಿಗುವ ಎಲ್ಲಾ ಅವಕಾಶಗಳ ಸದುಪಯೋಗ ಪಡೆದು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಉತ್ತಮ ಕೌಶಲ ಬೆಳೆಸಿಕೊಂಡು ಕಲಿಕೆಯೊಂದಿಗೆ ಗಳಿಕೆಗೂ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಸಂಸ್ಥೆಯ ಪ್ರಾಂಶುಪಾಲ ವಿಶ್ವೇಶ್ವರ ಪ್ರಸಾದ್ ಸ್ವಾಗತಿಸಿದರು. ರಾಮಚಂದ್ರ ಶೆಟ್ಟಿ ಧನ್ಯವಾದವಿತ್ತರು. ಪದ್ಮಪ್ರಸಾದ್ ಬಿ. ಕಾರ್ಯಕ್ರಮ ನಿರ್ವಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-29-456009932

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.