ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

UPSC: ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆ ವೇಳಾಪಟ್ಟಿ ಪ್ರಕಟ

Last Updated 27 ನವೆಂಬರ್ 2021, 8:23 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ)ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪೂರ್ವಭಾವಿ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಮಾತ್ರ ಮುಖ್ಯ ಪರೀಕ್ಷೆಯನ್ನು ಬರೆಯಬಹುದು. ಆಯ್ಕೆಯಾದ ಅಭ್ಯರ್ಥಿಗಳ ವಿವರ ವೆಬ್‌ಸೈಟ್‌ನಲ್ಲಿ ಬಿಡುಗಡೆಯಾಗಿದೆ.

ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯು ಜನವರಿ 07 ರಿಂದ 16ರ (2022) ವರೆಗೆ ನಡೆಯಲಿದೆ. ಒಟ್ಟು 5 ದಿನಗಳ ಕಾಲ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ದಿನಕ್ಕೆ 2 ಪತ್ರಿಕೆಗಳಿಗೆ ಉತ್ತರಿಸಬೇಕು ಎಂದು ಆಯೋಗ ತಿಳಿಸಿದೆ.

ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ upsc.gov.in ಗೆ ಭೇಟಿ ನೀಡಬಹುದು.

ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತಕ್ಕೆ ಪ್ರವೇಶ ಪಡೆಯುತ್ತಾರೆ. ಮುಂದಿನ ಹಂತದಲ್ಲಿ ಸಂದರ್ಶನ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ ಈ ವೆಬ್‌ಸೈಟ್‌ ನೋಡಿ: www.upsc.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT