ಮಂಗಳವಾರ, ಮೇ 17, 2022
23 °C

UPSC | ಭಾರತೀಯ ಅರಣ್ಯ ಸೇವೆ: ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಭಾರತೀಯ ಅರಣ್ಯ ಸೇವೆಗಳ (ಐಎಫ್‌ಎಸ್‌)ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.  

ಈ ಹಿಂದೆ ಪೂರ್ವಭಾವಿ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆ ಬರೆದಿದ್ದರು. ಅವರು ವೇಳಾಪಟ್ಟಿ ನೋಡಬಹುದು. ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ ಮೂಲಕ ಫಲಿತಾಂಶ ಪಡೆಯಬಹುದು ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಮುಖ್ಯ ಪರೀಕ್ಷೆಯು 2022 ರ ಫೆಬ್ರುವರಿ 27 ರಿಂದ ಮಾರ್ಚ್‌ 06 ರವರೆಗೆ ನಡೆದಿತ್ತು. ಒಟ್ಟು 7 ದಿನಗಳ ಕಾಲ ಪರೀಕ್ಷೆ ಜರುಗಿತ್ತು.

ಐಎಫ್‌ಎಸ್‌ ಮುಖ್ಯ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮುಂದಿನ ಸಂದರ್ಶನ ಹಂತಕ್ಕೆ ಹೋಗುತ್ತಾರೆ. ಈ ಹಂತದಲ್ಲಿ  ಶೈಕ್ಷಣಿಕ ದಾಖಲೆಗಳು, ಜಾತಿ ಪ್ರಮಾಣ ಪತ್ರ, ಮೀಸಲಾತಿ ಕೋರುವ ಪ್ರಮಾಣ ಪತ್ರ, ಇತರೆ ದಾಖಲೆಗಳನ್ನು ಸಲ್ಲಿಸಬೇಕು.

ವೆಬ್‌ಸೈಟ್‌https://www.upsc.gov.in

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು