ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

UPSC: ಭಾರತೀಯ ಆರ್ಥಿಕ ಸೇವೆ, ಸಂಖ್ಯಾಶಾಸ್ತ್ರ ಸೇವೆ ಹುದ್ದೆಗಳಿಗೆ ಅರ್ಜಿ

Last Updated 7 ಏಪ್ರಿಲ್ 2022, 7:49 IST
ಅಕ್ಷರ ಗಾತ್ರ

ಭಾರತೀಯ ಆರ್ಥಿಕ ಸೇವೆ ಮತ್ತು ಭಾರತೀಯ ಸಂಖ್ಯಾಶಾಸ್ತ್ರ ಸೇವೆ ಹುದ್ದೆಗಳ ನೇಮಕಾತಿಗೆಕೇಂದ್ರ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಒಟ್ಟು 53 ಹುದ್ದೆಗಳನ್ನು ಭರ್ತಿಮಾಡಿ ಕೊಳ್ಳಲಾಗುವುದು. ಅಭ್ಯರ್ಥಿಗಳನ್ನು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಹಾಕಬೇಕು.

ಹುದ್ದೆಗಳ ಸಂಖ್ಯೆ: 53
ಭಾರತೀಯ ಆರ್ಥಿಕ ಸೇವೆ : 24
ಭಾರತೀಯ ಅಂಕಿಅಂಶ ಸೇವೆ : 29

ವಿದ್ಯಾರ್ಹತೆ...

1) ಭಾರತೀಯ ಆರ್ಥಿಕ ಸೇವೆ : ಅರ್ಥಶಾಸ್ತ್ರ / ಅಪ್ಲೈಡ್ ಎಕನಾಮಿಕ್ಸ್‌ / ಬ್ಯುಸಿನೆಸ್ ಎಕನಾಮಿಕ್ಸ್‌ / ಎಕನಾಮೆಟ್ರಿಕ್ಸ್‌ ಪೋಸ್ಟ್‌ನಲ್ಲಿ ಪದವಿ ಪಡೆದಿರಬೇಕು.

2) ಭಾರತೀಯ ಅಂಕಿಅಂಶ ಸೇವೆ: ಸ್ಟ್ಯಾಟಿಸ್ಟಿಕ್ಸ್ / ಮ್ಯಾಥೆಮೆಟಿಕಲ್ ಸ್ಟ್ಯಾಟಿಸ್ಟಿಕ್ಸ್ / ಅಪ್ಲೈಡ್ ಸ್ಟ್ಯಾಟಿಸ್ಟಿಕ್ಸ್‌ ಪದವಿ ಪಡೆದಿರಬೇಕು.

ವೇತನ: ಕೇಂದ್ರ ಸರ್ಕಾರ ವೇತನ ಆಯೋಗದ ಅನ್ವಯ ಗ್ರೂಪ್‌ ‘ಎ‘ ಅಡಿಯಲ್ಲಿ ಮಾಸಿಕ ವೇತನ ನೀಡಲಾಗುವುದು.

ವಯಸ್ಸು

*ಕನಿಷ್ಠ 21 ವರ್ಷಗಳಾಗಿರಬೇಕು.

ವಯೋಮಿತಿ ಸಡಿಲಿಕೆ

* ಸಾಮಾನ್ಯ ವರ್ಗದ ಅಭ್ಯರ್ಥಿಗಳು– ಗರಿಷ್ಠ 32 ವರ್ಷ

* ಹಿಂದುಳಿದ ವರ್ಗದ ಅಭ್ಯರ್ಥಿಗಳು– ಗರಿಷ್ಠ 35 ವರ್ಷ

* ಪ.ಜಾತಿ, ಪ.ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು– 37 ವರ್ಷ

* ಅಂಗವಿಕಲ ಅಭ್ಯರ್ಥಿಗಳಿಗೆ –42 ವರ್ಷಗಳು

ಅರ್ಜಿ ಶುಲ್ಕ

ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹ 100 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ನೇಮಕಾತಿ: ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ ಅನ್ನು ಕ್ಲಿಕ್ಕಿಸಿ ಮಾಹಿತಿ ಪಡೆಯಬಹುದು.

ಅರ್ಜಿ ಸಲ್ಲಿಸುವ ವಿಧಾನ

* ಲೋಕಸೇವಾ ಆಯೋಗದ ವೆಬ್‌ಸೈಟ್‌ https://upsc.gov.in ಗೆ ಲಾಗಿನ್‌ ಆಗಿ ಅನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು.

ಮುಖ್ಯ ಮಾಹಿತಿ

* ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 26-04-2022

* ಯುಪಿಎಸ್‌ಸಿ ವೆಬ್‌ಸೈಟ್‌: https://upsc.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT