ವಿಶ್ವೇಶ್ವರಯ್ಯ ಜಲ ನಿಗಮ: 68 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ ಖಾಲಿ ಇರುವ 68 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ನಿಗದಿತ ಅರ್ಜಿ ನಮೂನೆ ಮೂಲಕವೇ ಭರ್ತಿ ಮಾಡಿ, ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು. ಚಿತ್ರದುರ್ಗ ಹಾಗೂ ಬೆಂಗಳೂರು ಕಚೇರಿಗೆ ಮಾತ್ರ ನೇಮಕಾತಿ ಮಾಡಿಕೊಳ್ಳಲಾಗುವುದು.
ಹುದ್ದೆಗಳ ವಿವರ
1) ಅಧಿಕಾರಿ ಹುದ್ದೆಗಳು –6
2) ಅಕೌಂಟೆಂಟ್ –06
3) ಕಚೇರಿ ಸಹಾಯಕರು –11
4) ಆಪ್ತ ಸಹಾಯಕರು –05
5) ಡಾಟಾ ಎಂಟ್ರಿ ಆಪರೇಟರ್ –10
6) ಟೆಲಿಫೋನ್ ಆಪರೇಟರ್ –01
7) ವಾಹನ ಚಾಲಕರು –12
8) ಅಟೆಂಡರ್ –12
9) ಜವಾನರು –5
ವೇತನ: ರಾಜ್ಯ ಸರ್ಕಾರದ ವೇತನ ಆಯೋಗದ ಪ್ರಕಾರವಾಗಿ ವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ವಿಶ್ವೇಶ್ವರಯ್ಯ ಜಲ ನಿಗಮದ ವೆಬ್‌ಸೈಟ್ ನೋಡುವುದು.
ಶೈಕ್ಷಣಿಕ ಅರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಸಂಬಂಧಿತ ವಿಷಯದಲ್ಲಿ ಎಸ್‌ಎಸ್‌ಎಲ್/ಪಿಯುಸಿ/ಡಿಪ್ಲೋಮಾ ಸೇರಿದಂತೆ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
ವಯಸ್ಸು: ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ ವಯೋಮಿತಿ 35 ವರ್ಷ.
ವಯೋಮಿತಿ ವಿವರ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.
ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ನಿಗದಿತ ನಮೂನೆ ಮೂಲಕವೇ ಸಲ್ಲಿಸಬೇಕು. ನಿಗಮದ ಅಧಿಕೃತ ಅಫೀಶಿಯಲ್ ವೆಬ್‌ಸೈಟ್ http://vjnl.in/en ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ವಿಳಾಸವನ್ನು ಈ ಕೆಳಗೆ ನೀಡಿರುವ ವೆಬ್‌ಸೈಟ್ ಮೂಲಕ ಪಡೆಯಬಹುದು.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಜುಲೈ 22, 2021
ವೆಬ್‌ಸೈಟ್: http://vjnl.in/en
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.