ಮಂಗಳವಾರ, ಸೆಪ್ಟೆಂಬರ್ 21, 2021
27 °C

ಡಿಪ್ಲೊಮಾ ವಿದ್ಯಾರ್ಹತೆ | ವಿಕ್ರಮ್ ಸಾರಾಬಾಯಿ ಕೇಂದ್ರ: 158 ಹುದ್ದೆಗಳಿಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾರತೀಯ ಬಾಹ್ಯಾಕಾಶ ಸಂಸ್ಥೆಯ ವಿಕ್ರಮ್ ಸಾರಾಬಾಯಿ ಬಾಹ್ಯಾಕಾಶ ಕೇಂದ್ರದಲ್ಲಿ (ವಿಎಸ್‌ಎಸ್‌ಸಿ)ದಲ್ಲಿ ಖಾಲಿ ಇರುವ ವಿವಿಧ ಟೆಕ್ನೀಷಿಯನ್‌ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನುಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನಿ ತಿರಸ್ಕರಿಸಲಾಗುತ್ತದೆ.

ಹುದ್ದೆಗಳ ವಿವರ: ಆಟೋಮೊಬೈಲ್ ಎಂಜಿನಿಯರಿಂಗ್, ಕೆಮಿಕಲ್ ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್‌, ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್, ಇನ್‌ಸ್ಟ್ರುಮೆಂಟ್ ಟೆಕ್ನಾಲಜಿ, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಹುದ್ದೆಗಳು ಖಾಲಿ ಇವೆ.

ಹುದ್ದೆಗಳ ಒಟ್ಟು ಸಂಖ್ಯೆ: 158

ವಿದ್ಯಾರ್ಹತೆ: ಸಂಬಂಧಿತ ವಿಭಾಗಗಳಲ್ಲಿ ಡಿಪ್ಲೊಮಾ ಪಾಸ್ ಮಾಡಿರಬೇಕು.

ವಯಸ್ಸು: ಆಗಸ್ಟ್‌ 2021ಕ್ಕೆ ಅನ್ವಯವಾಗುವಂತೆ 18ರಿಂದ 30 ವರ್ಷದೊಳಗಿನವರಾಗಿರಬೇಕು.

ವಯೋಮಿತಿ: ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ( ಆಗಸ್ಟ್‌ 2021ಕ್ಕೆ ಅನ್ವಯವಾಗುವಂತೆ). ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆ ಮೂಲಕ ಅಂತಿಮ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 04-08-2021

ಹೆಚ್ಚಿನ ಮಾಹಿತಿಗೆ: https://www.vssc.gov.in/VSSC

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು