ಹುಕ್ಕೇರಿ: ‘ಮಹಿಳೆಯರು ವೃತ್ತಿ ತರಬೇತಿ ಪಡೆದುಕೊಂಡು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿಯಾಗಬೇಕು’ ಎಂದು ಮಹಿಳಾ ಕಲ್ಯಾಣ ಸಂಸ್ಥೆಯ ಸಂಯೋಜಕಿ ಸುರೇಖಾ ಪಾಟೀಲ ಹೇಳಿದರು.

ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿ ಎಫ್ವಿಟಿಆರ್ಎಸ್ ಬೆಂಗಳೂರು ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಶಕ್ತಿ ಸದನ ಮಹಿಳೆಯರ ಪುನರ್ವಸತಿ ಕೇಂದ್ರ ಹಿಡಕಲ್ ಡ್ಯಾಂ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 4 ತಿಂಗಳ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಿಸಿ ಮಾತನಾಡಿದರು.

‘ಮಹಿಳೆಯರು ಆರ್ಥಿಕವಾಗಿ ಸಬಲರಾದಾಗ ಮಾತ್ರ ಕುಟುಂಬದ ಏಳಿಗೆಗೆ ಪೂರಕ’ ಎಂದರು.

ಅಧ್ಯಕ್ಷತೆ ವಹಿಸಿದ್ದ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಜಯಶ್ರೀ ಮತ್ತಿಕೊಪ್ಪ, ‘ಗ್ರಾಮೀಣ ಭಾಗದ ಮಹಿಳೆಯರಿಗೆ ಇಂತಹ ತರಬೇತಿಗಳು ಅಗತ್ಯ’ ಎಂದು ಶ್ಲಾಘಿಸಿದರು.

ಬಸವರಾಜ ಮಣ್ಣಿಕೇರಿ, ಶಕ್ತಿ ಸದನ ಮಹಿಳಾ ಪುನರ್ವಸತಿ ಕೇಂದ್ರದ ಅಧೀಕ್ಷಕಿ ದ್ರಾಕ್ಷಾಯಿನಿ ಮಠಪತಿ ಹಾಗೂ ತರಬೇತಿದಾರ ಮಂದಾಕಿನಿ ಹಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-21-775796862

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.