ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ ಜಿಲ್ಲಾ ನ್ಯಾಯಾಲಯ: ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಜಿ

Last Updated 6 ಏಪ್ರಿಲ್ 2023, 11:38 IST
ಅಕ್ಷರ ಗಾತ್ರ

ಯಾದಗಿರಿ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು : ಶೀಘ್ರಲಿಪಿಗಾರರು ಗ್ರೇಡ್‌ -3
ಹುದ್ದೆಗಳ ಸಂಖ್ಯೆ : 06
ವೇತನ ಶ್ರೇಣಿ : ರೂ.27,650-52,650 ಸೇರಿದಂತೆ ಇತರೆ ಭತ್ಯೆಗಳು

ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪಾಸ್ ಮಾಡಿರಬೇಕು ಅಥವಾ ಡಿಪ್ಲೊಮ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಪ್ರೌಢ ದರ್ಜೆ ಮತ್ತು ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪ್ರೌಢ ದರ್ಜೆ ಅಥವಾ ತತ್ಸಮಾನ ಪರೀಕ್ಷೆ ಪಾಸ್ ಮಾಡಿರಬೇಕು.

ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು. ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷದವರೆಗೆ ಅರ್ಜಿ ಹಾಕಲು ಅವಕಾಶ ಇರುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ₹ 200, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.100.

ಆಯ್ಕೆ ವಿಧಾನ: ನೇರ ನೇಮಕಾತಿ ಮೂಲಕ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಸಲು ಕಡೆ ದಿನ: 29-04-2023

ವೆಬ್‌ಸೈಟ್‌: https://districts.ecourts.gov.in/yadgir-onlinerecruitment

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT