ಯಲಬುರ್ಗಾ: ‘ಪಟ್ಟಣದ ಸ್ವಚ್ಛತೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರ ಸೇವೆ ಸ್ಮರಣೀಯ’ ಎಂದು ಇನ್ನರ್ವೀಲ್ ಸಂಸ್ಥೆಯ ಮಾಜಿ ಅಧ್ಯಕ್ಷೆ ಶಕುಂತಲಾದೇವಿ ಮಾಲಿಪಾಟೀಲ ಹೇಳಿದರು.

ಸಂಸ್ಥೆಯ ವತಿಯಿಂದ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಪೌರ ಕಾರ್ಮಿಕರ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೌರ ಕಾರ್ಮಿಕರು ಸೇವೆಗೆ ಸರಿಯಾಗುವ ಯಾವುದೇ ಸೇವೆಯಿಲ್ಲ. ಈ ಸೇವೆಯಲ್ಲಿ ನಿರತ ಕಾರ್ಮಿಕರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಕೊಡಬೇಕು. ಸರ್ಕಾರ ವಿಶೇಷ ಸೌಲಭ್ಯ ಮತ್ತು ವಿವಿಧ ನೆರವು ಕಲ್ಪಿಸಿಕೊಡುವ ಮೂಲಕ ಗೌರವಿಸುವ ಕೆಲಸ ಮಾಡಬೇಕು’ ಎಂದರು.

ಪಂಚಾಯಿತಿಯ ಮಹಿಳಾ ಕಾರ್ಮಿಕರಿಗೆ ಉಡುಗೊರೆ ನೀಡಿ ಸನ್ಮಾನಿಸಲಾಯಿತು. ಹಾಗೆಯೇ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ ಅವರನ್ನು ಕ್ಲಬ್ ವತಿಯಿಂದ ಗೌರವಿಸಲಾಯಿತು.

ಅಧ್ಯಕ್ಷೆ ಚೆನ್ನಮ್ಮ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಸುನೀತ ಪತಂಗರಾಯ, ಸವಿತಾ ಮುರಡಿಮಠ, ನಿರ್ಮಾಲಾ ಗೋಣಿ, ಮಂಜುಳಾ ಹಾಳಕೇರಿ, ಉಮಾ ಹೊಸಮನಿ, ನಾಗರತ್ನ ನುಲಿ, ಪಟ್ಟಣ ಪಂಚಾಯಿತಿ ಅಧಿಕಾರಿ ಸುಮಾ ಕಂಚಿ, ವನರಾಜ, ಶ್ರೀದೇವಿ ಕಲ್ಯಾಣಮಠ, ಆರ್ಡಿಸಿಸಿ ಬ್ಯಾಂಕ್ ನಿರ್ದೇಶಕ ಶೇಖರಗೌಡ ಉಳ್ಳಾಗಡ್ಡಿ, ವಕೀಲ ವಿ.ಎಸ್.ಭೂಸನೂರಮಠ, ಎ.ಎಂ.ಪಾಟೀಲ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶಗೌಡ ಶಿವನಗೌಡ, ಭಾಗಿರಥಿ ಜೋಗಿನ, ಭೀಮಣ್ಣ ಹವಳಿ ಸೇರಿ ಅನೇಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-35-823364558

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.