ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್‌ 13ರಿಂದ 5, 8ನೇ ತರಗತಿ ಪರೀಕ್ಷೆ

Last Updated 23 ಫೆಬ್ರವರಿ 2023, 22:01 IST
ಅಕ್ಷರ ಗಾತ್ರ

ಬೆಂಗಳೂರು: ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದ್ದು, ಮಾರ್ಚ್‌ 13ರಿಂದ 18ರವರೆಗೆ, ಪ್ರತಿದಿನ ಮಧ್ಯಾಹ್ನ 2.30ರಿಂದ 4.30ರವರೆಗೆ ಪರೀಕ್ಷೆಗಳು ನಡೆಯಲಿವೆ.

ಎಂಟನೇ ತರಗತಿಗೆ 13ರಿಂದ ಆರು ದಿನಗಳು, ಐದನೇ ತರಗತಿಗೆ 15ರಿಂದ ನಾಲ್ಕು ದಿನಗಳು ಪರೀಕ್ಷೆಗಳು ನಡೆಯಲಿವೆ.

ಎಂಟನೇ ತರಗತಿಗೆ 13ರಂದು ಪ್ರಥಮ ಭಾಷೆ, 14ರಂದು ದ್ವಿತೀಯ ಭಾಷೆ, 15ರಂದು ತೃತೀಯ ಭಾಷಾ ವಿಷಯಗಳು, 16ರಂದು ಗಣಿತ, 17ರಂದು ವಿಜ್ಞಾನ ಹಾಗೂ 18ರಂದು ಸಮಾಜವಿಜ್ಞಾನ ಪರೀಕ್ಷೆಗಳು ನಡೆಯುತ್ತವೆ.

ಐದನೇ ತರಗತಿಗೆ 15ರಂದು ಪ್ರಥಮ ಭಾಷೆ, 16ರಂದು ಗಣಿತ, 17ರಂದು ಪರಿಸರ ಅಧ್ಯಯನ, 18ರಂದು ದ್ವಿತೀಯ ಭಾಷಾ ಪರೀಕ್ಷೆಗಳು ನಡೆಯುತ್ತವೆ. ಪ್ರತಿ ಪತ್ರಿಕೆಯು ತಲಾ 40 ಅಂಕಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಒಂದು ಅಂಕದ 20 ಬಹು ಆಯ್ಕೆಯ ಪ್ರಶ್ನೆಗಳು, 20 ಅಂಕಗಳಿಗೆ ವಿವರಣಾತ್ಮಕ ಉತ್ತರ ಬರೆಯುವ ಪ್ರಶ್ನೆಗಳಿರುತ್ತವೆ. ಅವುಗಳಲ್ಲಿ ಎರಡು ಅಂಕದ ಐದು ಪ್ರಶ್ನೆಗಳು, ಮೂರು ಅಂಕದ ಎರಡು ಪ್ರಶ್ನೆಗಳು, ನಾಲ್ಕು ಅಂಕದ ಒಂದು ಪ್ರಶ್ನೆಯನ್ನು ಪತ್ರಿಕೆಗಳು ಒಳಗೊಂಡಿರುತ್ತವೆ. ಉತ್ತರಿಸಲು ಎರಡು ಗಂಟೆ ಸಮಯ ನಿಗದಿ ಮಾಡಲಾಗಿದೆ.

ಮಾರ್ಚ್‌ 6ರಿಂದ 10ರವರೆಗೆ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸೂಚಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT