ಅಜ್ಜಂಪುರ: ‘2025- 26ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 80ಕ್ಕಿಂತ ಅಧಿಕ ಅಂಕ ಪಡೆದ ಹಾಗೂ ಜಿಲ್ಲೆಯ ಆರ್ಥಿಕವಾಗಿ ಹಿಂದುಳಿದ ನೊಳಂಬ ಸಮಾಜ ವಿದ್ಯಾ ರ್ಥಿಗಳು, ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬೇಕು’ ಎಂದು ನೊಳಂಬ ಲಿಂಗಾ ಯತ ಸಮಾಜದ ಮುಖಂಡ ಎಸ್.ಎಂ. ನಾಗರಾಜ್ ಮನವಿ ಮಾಡಿದರು.

ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಆಧಾರ್ ಕಾರ್ಡ್, 2 ಪಾಸ್ಪೋರ್ಟ್ ಅಳತೆ ಫೋಟೋ ಹಾಗೂ ಆರ್ಥಿಕವಾಗಿ ಹಿಂದುಳಿದವರು ಹೆಚ್ಚುವರಿಯಾಗಿ ಆದಾಯ ದೃಢೀಕರಣ ಪತ್ರದೊಂದಿಗೆ ಪಟ್ಟಣದ ಗುರು ಸಿದ್ದರಾಮೇಶ್ವರ ಸಮುದಾಯ ಭವನದ ವ್ಯವಸ್ಥಾಪಕರಿಗೆ ಮೇ 23ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ. 72599 15368, 93535 69036 ಸಂಪರ್ಕಿಸಬಹುದು ಎಂದರು.

ನೊಳಂಬ ಲಿಂಗಾಯತ ಸಂಘ ಹಾಗೂ ಗುರು ಸಿದ್ಧರಾಮೇಶ್ವರ ಸಮುದಾಯ ಭವನ ಉಪ ಸಮಿತಿ ವತಿಯಿಂದ ಮೇ 31ರಂದು ಬೆಳಿಗ್ಗೆ 10.30ಕ್ಕೆ ಪಟ್ಟಣದ ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿರುವ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಲಾಗುವುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುರು ಸಿದ್ದರಾಮೇಶ್ವರ ಸಮುದಾಯ ಭವನ ಉಪ ಸಮಿತಿ ಅಧ್ಯಕ್ಷ ಬಸಪ್ಪ, ಕಾರ್ಯದರ್ಶಿ ಸಿದ್ದರಾಮಪ್ಪ, ಕೇಂದ್ರ ಸಮಿತಿ ಸದಸ್ಯ ಶಿವರಾಜು, ಸಿದ್ದರಾಮಪ್ಪ, ಜಗದೀಶ್, ಕುಮಾರಸ್ವಾಮಿ, ಕಾಂತರಾಜು, ರಾಮಚಂದ್ರಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-126-83265267

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.