ಅಜ್ಜಂಪುರ: ‘ಕನ್ನಡ ಸಾಹಿತ್ಯ ಪರಿಷತ್ತು ನಾಡಿನ ನೆಲ-ಜಲ, ಭಾಷೆ, ಕಲೆ-ಸಾಹಿತ್ಯ- ಸಂಗೀತ ಸಂರಕ್ಷಿಸಲು ನಿರಂತರವಾಗಿ ಶ್ರಮಿಸುತ್ತಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಅಧ್ಯಕ್ಷ ಎಚ್.ಆರ್. ಚಂದ್ರಪ್ಪ ನುಡಿದರು.

ಪಟ್ಟಣದ ಕೈಲಾಸಂ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ‘ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.

‘ಪರಿಷತ್ತು ಹೋಬಳಿ, ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದಲ್ಲಿ ಸಾಹಿತ್ಯ ಸಮ್ಮೇಳನ ನಡೆಸುವ ಮೂಲಕ ಕನ್ನಡ ಭಾಷೆ ಸಾಹಿತ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ ನಡೆಸಿಕೊಂಡು ಬಂದಿದೆ. ಕಲೆ–ಸಂಗೀತ–ಸಾಹಿತ್ಯದಲ್ಲಿ ಸಾಧನೆ ಮಾಡುತ್ತಿರುವ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ, ಗೌರವಿಸುವ ಕೆಲಸ ನಿರ್ವಹಿಸುತ್ತಿದೆ’ ಎಂದರು.

ಪರಿಷತ್ತಿನ ಟಿ.ಸಿ. ಶಿವಕುಮಾರ ಸ್ವಾಮಿ, ‘ಸರ್ಕಾರ, ಭಾಷೆ–ಸಾಹಿತ್ಯ ಉಳಿಸಲು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡುತ್ತಿದೆ. ಮತ್ತೊಂದೆಡೆ ಪ್ರತಿವರ್ಷ ನೂರಾರು ಆಂಗ್ಲ ಮಾಧ್ಯಮ ಶಾಲೆ ತೆರೆಯಲು ಪರವಾನಗಿ ನೀಡುತ್ತಿದೆ. ಈ ಮೂಲಕ ಕನ್ನಡ ಭಾಷೆ ವಿಷಯದಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿದೆ’ ಎಂದರು.

ಸಾಹಿತಿ ಚಂದ್ರ ಪ್ರಕಾಶ್, ‘ಯುವಜ ನಾಂಗ ಕನ್ನಡ ಭಾಷೆ ನಿರ್ಲಕ್ಷಿಸಿ, ಆಂಗ್ಲ ಭಾಷಾ ಬಳಕೆಗೆ ಒಲವು ತೋರುತ್ತಿರುವುದು ದುರದೃಷ್ಟಕರ’ ಎಂದರು. ಕಾರ್ಯಕ್ರಮದಲ್ಲಿ ವಿಜಯ ಕುಮಾರಿ ಮಾತನಾಡಿದರು.

ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಪಿ. ರಾಜಪ್ಪ, ರಂಗ ಕಲಾವಿದ ಎ.ಎಸ್. ಕೃಷ್ಣಮೂರ್ತಿ, ಗಡೀಹಳ್ಳಿ ಪ್ರಸನ್ನ, ರವಿ, ಮಧು ಮಾಲತಿ, ಮೋಹನ್ ಜಾಧವ್, ನವೀನ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-126-1797064505

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.