ಆಲಮೇಲ: ‘ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಖಾಸಗಿ ಕಂಪನಿಗಳು ಪೀಠೋಪಕರಣಗಳಂತ ದೇಣಿಗೆ ನೀಡಿದರೆ ಶಾಲೆಗಳು ಪ್ರಗತಿ ಹೊಂದುತ್ತವೆ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಕೋರಮಂಡಲ್ ಇಂಟರ್ ನ್ಯಾಷನಲ್ ಲಿ. ಕಂಪನಿ ಸಿ.ಎಸ್.ಆರ್ಯೋಜನೆಯಡಿ ತಾಲ್ಲೂಕಿನ ಹೂವಿನಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ₹10 ಲಕ್ಷ ಮೊತ್ತದ ಪೀಠೋಪಕರಣಗಳ ವಿತರಣೆ, ಕಬ್ಬು ಬೆಳೆಗಾರರವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಖಾಸಗಿ ಕಂಪನಿಗಳು ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿ ಜೊತೆಗೆ ರೈತರ ಬೆಳೆಗಳ ಮಾಹಿತಿ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಉಪಯುಕ್ತವಾಗಿದೆ. ರೈತರು ಪಾಲ್ಗೊಂಡು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಹೇಳಿದರು.

ತಾರಾಪುರ ಹಿರೇಮಠದ ಗುರುಲಿಂಗ ಶಿವಾಚಾರ್ಯರು, ಸಂಗಯ್ಯ ಸ್ವಾಮಿ ಹಿರೇಮಠ, ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸಿದ್ದರಾಮ ಪಾಟೀಲ, ಕೋರಮಂಡಲ್ ಕಂಪನಿಯ ರಾಜ್ಯ ಮುಖ್ಯ ವ್ಯವಸ್ಥಾಪಕ ಶಿವನಗೌಡ ಪಾಟೀಲ್, ಬೆಂಗಳೂರು ಹಿರಿಯ ವಲಯ ವ್ಯವಸ್ಥೆ ರಂಜಿತ್ ಕುಮಾರ್ ಶೆಟ್ಟಿ, ಅಬ್ದುಲ್ ರಜಾಕ್, ಸಹಾಯಕ ಕೃಷಿ ಅಧಿಕಾರಿ ಪ್ರಶಾಂತ್ ಶಾಣಿ, ಅಲಮೇಲ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಅನಿಲ ದಶವಂತ, ಪಶುಸಂಗೋಪನಾಧಿಕಾರಿ ಶಿವನಗೌಡ ಯಲಗೊಂಡ, ಪ್ರಕಾಶ ಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-26-107876161

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.