ಆಲ್ದೂರು: ರೇಣುಕಾಚಾರ್ಯ ಮತ್ತು ಬಸವೇಶ್ವರ ಜಯಂತಿ ಪ್ರಯುಕ್ತ ಮಾಚಗೊಂಡನಹಳ್ಳಿ ಬೇರುಗಂಡಿ ಬೃಹನ್ಮಠದ ನಾಗಶ್ರೀ ಸಭಾಂಗಣದಲ್ಲಿ ಗುರುವಾರ ವೀರಶೈವ ಲಿಂಗಾಯತ ಸಮುದಾಯದಿಂದ ಎಸ್ಎಸ್ಎಲ್ಸಿ ಮತ್ತು ಪಿಯು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಲಿಂಗಾಯತ ಸಮಾಜದ ಪ್ರಧಾನ ಕಾರ್ಯದರ್ಶಿ ಹರೀಶ್ ಯಲಗುಡಿಗೆ, ಸಮುದಾಯದ ಸಾಧಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಕಾರ್ಯಕ್ರಮದ ಉದ್ದೇಶ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಸಿಪಿಐ ಪಿ.ಪಿ. ಸೋಮೇಗೌಡ, ವಿದ್ಯಾರ್ಥಿಗಳ ಜೀವನ ತಪಸ್ಸಿನಂತೆ ಅವರ ಸಾಧನೆ, ಪ್ರೇರಣೆಗೆ ಶಕ್ತಿ ತುಂಬಿದ ಪೋಷಕರು– ಶಿಕ್ಷಕರು ಮತ್ತು ಸಮಾಜವನ್ನು ಶ್ಲಾಘಿಸಬೇಕು. ವಿದ್ಯಾರ್ಥಿಗಳು ಮಾದಕ ವ್ಯಸನ, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಪೋಷಕರು ಎಚ್ಚರ ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಬೇರುಗಂಡಿ ಬೃಹನ್ಮಠದ ಪೀಠಾಧ್ಯಕ್ಷ ರೇಣುಕಾ ಮಹಾಂತ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಬಸವೇಶ್ವರ ಮತ್ತು ರೇಣುಕಾಚಾರ್ಯ ಜಯಂತಿಯನ್ನು ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡುವ ಮೂಲಕ ಮುಖಂಡರು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ವ್ಯಕ್ತಿಯು ದುರಾಚಾರದಿಂದ ದೂರವಿದ್ದು ಸದಾಚಾರ, ಸನ್ನಡತೆ ಬೆಳೆಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.

ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ವನಮಾಲಾ ಮೃತ್ಯುಂಜಯ ಅವರು, ಪ್ರತಿಭಾ ಪುರಸ್ಕಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಇದ್ದು, ಇಂದು ಮಹಿಳೆಯರು ಸಾಧಿಸದ ಕ್ಷೇತ್ರಗಳೇ ಇಲ್ಲ. ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.

ಮುಖಂಡ ಬಿ.ಬಿ. ರೇಣುಕಾಚಾರ್ಯ ಅವರು, ಸದ್ಗುರು ರೇಣುಕಾಚಾರ್ಯ ಮತ್ತು ಬಸವೇಶ್ವರರ ವ್ಯಕ್ತಿತ್ವ, ಆದರ್ಶಗಳ ಕುರಿತು ಮಾಹಿತಿ ಹಂಚಿಕೊಂಡರು.

ವಿದ್ಯಾರ್ಥಿನಿ ಭುವನೇಶ್ವರಿ, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಉತ್ತಮ ಅಂಕಗಳನ್ನು ಗಳಿಸಿದ್ದು, ಸರ್ಕಾರಿ ಶಾಲೆಗಳಲ್ಲೂ ಉತ್ತಮ ಶಿಕ್ಷಕ ವರ್ಗ ಇದೆ. ಸಾಧನೆಗೆ ಪರಿಪೂರ್ಣ ಬೆಂಬಲವನ್ನು ನೀಡುತ್ತಾರೆ. ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲ ಎಂದರು.

ಪಿಯುಸಿಯಲ್ಲಿ ಉತ್ತಮ ಅಂಕಗಳಿಸಲು ಅನುಸರಿಸಿದ ಕ್ರಮಗಳ ಕುರಿತು ಮಾಹಿತಿ ಹಂಚಿಕೊಂಡರು.

ಹೋಬಳಿ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಮಹೇಶ್ ಕೆ.ಎಸ್. ಅಧ್ಯಕ್ಷತೆ ವಹಿಸಿದ್ದರು.

ನಾಡ ಪಟೇಲ್ ವೀರೇಂದ್ರ ಎ.ಎನ್. ಹಳೆ ಆಲ್ದೂರು, ಸಮಾಜದ ಮುಖಂಡರು, ನಿರ್ದೇಶಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-126-39189065

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.