ಅಳ್ಳಾವರ: ‘ವಿದ್ಯಾರ್ಥಿಗಳು ತಮ್ಮ ಸ್ವಸಾಮರ್ಥ್ಯ ಮತ್ತು ತಂತ್ರಜ್ಞಾನದ ಸದ್ಬಳಕೆಯಿಂದ ಸದೃಢ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಪ್ರಗತಿಪರ ರೈತ ಮಹಿಳೆ ಲಕ್ಷ್ಮೀ ಲೋಕೂರ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ಒಕ್ಕೂಟ, ಕ್ರೀಡಾ ವಿಭಾಗ, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಮತ್ತು ರೇಂಜರ್ಸ್, ಯೂತ್ ರೆಡ್ಕ್ರಾಸ್ ಘಟಕಗಳ ಆಶ್ರಯದಲ್ಲಿ ಮಂಗಳವಾರ ಕಾಲೇಜಿನ ಸಭಾಭವನದಲ್ಲಿ ಆಯೋಜಿಸಿದ್ದ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಕಳೆದ ವರ್ಷದ ಬಿಎ ಮತ್ತು ಬಿಕಾಂ ವಿಭಾಗಗಳಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿನಿಯರಾದ ಸೋನಿಯಾ, ತೃಪ್ತಿ ಬೋಬಾಟೆ, ಬಿಷ್ಟಮ್ಮ, ತೇಜಲ್, ಲಲಿತಾ ಸುಳಗೇಕರ್, ಶ್ವೇತಾ ದುಗ್ಗಾಣಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾಲೇಜಿನ ಉಪನ್ಯಾಸಕರಾದ ಡಾ.ಬಿ.ಸೋನೇಖಾನ್ ಹಾಗೂ ರೂಪಾ ನಾಯ್ಕ್ ಅವರು ಪಿಎಚ್ಡಿ ಪದವಿ ಪಡೆದ ಹಿನ್ನೆಲೆಯಲ್ಲಿ ಅಭಿನಂದಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಪ್ರಾಚಾರ್ಯೆ ಉಮಾ ಪೂಜಾರ್ ಅಧ್ಯಕ್ಷತೆ ವಹಿಸಿದ್ದರು. ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ವಿನಾಯಕ ಕುರುಬರ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಜಯಶ್ರೀ ಉಡುಪಿ, ಅಶೋಕ್ ಟೆಂಕಪ್ಪನವರ್, ಚೆನ್ನಬಸವರಾಜ ಚಾರಿ, ಉಮೇಶ್ ದೊಡ್ಡಮನಿ, ನಿಸಾರ್ ಖತೀಬ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-24-20933411

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.